ನೊಯ್ಡಾ : 22 ವರ್ಷದ ಯುವತಿಯನ್ನು 35 ವರ್ಷದ ವಿವಾಹಿತ ವ್ಯಕ್ತಿಯೊಬ್ಬ ಹಿಂಬಾಲಿಸಿ ಕಿರುಕುಳ ನೀಡುತ್ತಿದ್ದ ಘಟನೆ ನೊಯ್ಡಾದಲ್ಲಿ ನಡೆದಿದೆ.
ಆರೋಪಿ ಸ್ವೀಟ್ಸ್ ಅಂಗಡಿಯನ್ನು ಹೊಂದಿದ್ದು, ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ. ಆದರೆ ಆತ ಯುವತಿಯೊಬ್ಬಳು ಕೆಲಸ ಮುಗಿಸಿ ಮನೆಗೆ ಬರುತ್ತಿದ್ದಾಗ ಆಕೆಯನ್ನು ಹಿಂಬಾಲಿಸಿಕೊಂಡು ಬಂದು ಅಶ್ಲೀಲ ಪದಗಳಿಂದ ನಿಂದಿಸುತ್ತಿದ್ದ ಎನ್ನಲಾಗಿದೆ.
ಈ ಬಗ್ಗೆ ಯುವತಿ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.