Publish Date: Wed, 05 Aug 2020 (07:51 IST)
Updated Date: Wed, 05 Aug 2020 (11:30 IST)
ಕೊಚ್ಚಿ : ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ 75 ವರ್ಷದ ಮಹಿಳೆಯ ಮೇಲೆ ಕಾಮುಕರು ಅತ್ಯಾಚಾರ ಎಸಗಿದ ಘಟನೆ ಎರ್ನಾಕುಲಂ ಜಿಲ್ಲೆಯ ಕೋಲೆಂಚೇರಿ ಗ್ರಾಮದಲ್ಲಿ ನಡೆದಿದೆ.
ಈ ಘಟನೆಯಲ್ಲಿ ಸಂತ್ರಸ್ತ ಮಹಿಳೆಯ ಗುಪ್ತಾಂಗಕ್ಕೆ ಗಂಭೀರ ಗಾಯಗಳಾಗಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾಗೇ ಆಕೆಯ ಮಾನಸಿಕ ಸ್ಥಿತಿ ಕೂಡ ತೀರಾ ಹದಗೆಟ್ಟಿದೆ ಎನ್ನಲಾಗಿದೆ.
ಈ ಬಗ್ಗೆ ಪುಥೆನ್ ಕುರಿಶ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಮಹಿಳೆಗೆ ಮರೆಯುವ ಕಾಯಿಲೆ ಇರುವುದರಿಂದ ಘಟನೆಗೆ ಬಗ್ಗೆ ಯಾವುದೇ ಮಾಹಿತಿ ನೀಡುತ್ತಿಲ್ಲ. ಆದಕಾರಣ ಪೊಲೀಸರು ಮಹಿಳೆಯ ಅಕ್ಕಪಕ್ಕದ ಮನೆಯವರು ಹಾಗೂ ವಲಸೆ ಕಾರ್ಮಿಕರು ಸೇರಿದಂತೆ ಕೆಲವರನ್ನು ವಿಚಾರಣೆ ಮಾಡುತ್ತಿದ್ದಾರೆ.