Publish Date: Sat, 14 Nov 2020 (09:08 IST)
Updated Date: Sat, 14 Nov 2020 (09:36 IST)
ಕೊಯಮತ್ತೂರು : 90 ವರ್ಷದ ವೃದ್ಧೆಯ ಮೇಲೆ 20 ವರ್ಷದ ಯುವಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ಪೊಲ್ಲಾಚಿ ಪ್ರದೇಶದಲ್ಲಿ ನಡೆದಿದೆ.
ಸಂತ್ರಸ್ತೆ ತನ್ನ ಮನೆಯ ಕೋಣೆಯಲ್ಲಿ ಮಲಗಿದ್ದಾಗ ಯುವಕ ಆಕೆಯ ಕೋಣೆಗೆ ನುಗ್ಗಿ ಇಂತಹ ಕೃತ್ಯ ಎಸಗಿದ್ದಾನೆ. ಆ ವೇಳೆ ವೃದ್ದೆ ಪಕ್ಕದ ಕೋಣೆಯಲ್ಲಿ ಮಲಗಿದ್ದ ತನ್ನ ಮಗನನ್ನು ಕೂಗಿ ಕರೆದಾಗ ಆರೋಪಿ ಪರಾರಿಯಾಗಲು ಯತ್ನಿಸಿದ್ದಾನೆ. ತಕ್ಷಣ ಮಗ ಹಾಗೂ ಸಂಬಂಧಿಕರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಪೊಲ್ಲಾಚಿ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.