Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಉತ್ತರಪ್ರದೇಶ : ತನ್ನ ಪತಿಯ ಎದುರುಗಡೆ ಮಹಿಳೆಯೊಬ್ಬಳ ಮೇಲೆ ಮೂವರು ಪುರುಷರು ಸೇರಿ ಸಾಮೂಹಿಕ ಮಾನಭಂಗ ಎಸಗಿದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.
ಸಂತ್ರಸ್ತೆ ಮತ್ತು ಆಕೆಯ ಪತಿ ಮೋಟಾರು ಸೈಕಲ್ ನಲ್ಲಿ ಮನೆಗೆ ಮರಳುತ್ತಿದ್ದ ವೇಳೆ ರಸ್ತೆಯಲ್ಲಿ ತಡೆಯೊಡ್ಡಿದ ಮೂವರು ಪುರುಷರು ಇಬ್ಬರನ್ನು ಕೆಳಗಿಳಿಸಿ ಚೆನ್ನಾಗಿ ಥಳಿಸಿ ಇಬ್ಬರನ್ನು ಕಾಡಿಗೆ ಎಳೆದೊಯ್ದು ಅಲ್ಲಿ ಪತಿಯ ಎದುರುಗಡೆಯೇ ಪತ್ನಿಯ ಮೇಲೆ ಮಾನಭಂಗ ಎಸಗಿದ್ದಾರೆ. ಅಲ್ಲದೇ ಅದನ್ನು ಮೊಬೈಲ್ ನಲ್ಲಿ ಚಿತ್ರಿಸಿಕೊಂಡಿದ್ದಾರೆ. ಅಲ್ಲದೇ ಅವರ ಬಳಿ ಇದ್ದ ವಸ್ತುಗಳನ್ನು ದೋಚಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ದಂಪತಿಗಳು ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಲು ತಂಡ ರಚಿಸಿ ಹುಡುಕಾಡುತ್ತಿದ್ದಾರೆ ಎನ್ನಲಾಗಿದೆ.