ಬರೇಲಿ : 16 ವರ್ಷದ ಹುಡುಗಿಯನ್ನು ತನ್ನ ಗೆಳೆಯನೊಂದಿಗೆ ನಿರ್ಜನ ಪ್ರದೇಶಕ್ಕೆ ಕರೆದೊಯ್ದ 7 ಮಂದಿ ಯುವಕರು ಆಕೆಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಉತ್ತರಪ್ರದೇಶದ ಬರೇಲಿಯಲ್ಲಿ ನಡೆದಿದೆ.
ಆರೋಪಿ ಯುವಕರು ಆಕೆಯನ್ನು ಅನುಚಿತವಾಗಿ ಸ್ಪರ್ಶಿಸುತ್ತಾ ಅದನ್ನು ಮೊಬೈಲ್ ನಲ್ಲಿ ವಿಡಿಯೋ ಮಾಡಿದ್ದಾರೆ, ಬಳಿಕ ಆಕೆಗೆ ಈ ವಿಚಾರ ಯಾರಿಗೂ ಹೇಳಬಾರದೆಂದು ಬೆದರಿಕೆ ಹಾಕಿದ್ದಾರೆ. ಆದರೆ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಕಾಣಿಸಿಕೊಂಡ ಬಳಿಕ ಬೆಳಕಿಗೆಬಂದಿದೆ.
ತಕ್ಷಣ ಹುಡುಗಿಯ ಮನೆಯವರು ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅಲ್ಲದೇ ಹುಡುಗಿ ಈ ಘಟನೆಯಿಂದ ಆತ್ಮಹತ್ಯೆಗೂ ಕೂಡ ಯತ್ನಿಸಿದ್ದಾಳೆ ಎಂಬುದಾಗಿ ತಿಳಿದುಬಂದಿದೆ.