ನವದೆಹಲಿ: ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರನ್ನು ಗುರಿಯಾಗಿಸಿಕೊಂಡು 'ಜನಾಂಗೀಯ ಟೀಕೆ' ಮಾಡಿದ್ದಕ್ಕಾಗಿ ಕರ್ನಾಟಕದ ಕಾಂಗ್ರೆಸ್ ಸಚಿವ ಜಮೀರ್ ಅಹ್ಮದ್ ಅವರನ್ನು ಕೇಂದ್ರ ಸಚಿವ ಕಿರಣ್ ರಿಜಿಜು ಸೋಮವಾರ ತರಾಟೆಗೆ ತೆಗೆದುಕೊಂಡಿದ್ದಾರೆ.
ಚನ್ನಪಟ್ಟಣ ಉಪಚುನಾವಣೆಯ ಪ್ರಚಾರದ ವೇಳೆ ಸಚಿವ ಜಮೀರ್ ಅಹ್ಮದ್ ಅವರು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರನ್ನು 'ಕಾಲಿಯ' ಎಂದು ಕರೆಯುವ ಮೂಲಕ ವಿವಾದವನ್ನು ಹುಟ್ಟುಹಾಕಿದರು.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸಚಿವ ಕಿರಣ್ ರಿಜುಜು ಅವರು ಆಕ್ರೋಶ ಹೊರಹಾಕಿದ್ದಾರೆ.
"ಕಾಂಗ್ರೆಸ್ ಸಚಿವ ಜಮೀರ್ ಅಹ್ಮದ್ ಅವರು ಕೇಂದ್ರ ಸಚಿವರು ಮತ್ತು ಕರ್ನಾಟಕದ ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು 'ಕಾಲಿಯಾ ಕುಮಾರಸ್ವಾಮಿ' ಎಂದು ಕರೆಯುವುದನ್ನು ನಾನು ಬಲವಾಗಿ ಖಂಡಿಸುತ್ತೇನೆ" ಎಂದು ರಿಜಿಜು ಹೇಳಿದ್ದಾರೆ.
"ಇದು ಜನಾಂಗೀಯ ಹೇಳಿಕೆಯಾಗಿದೆ, ರಾಹುಲ್ ಗಾಂಧಿಯವರ ಸಲಹೆಗಾರರು ಕೂಡಾ ದಕ್ಷಿಣ ಭಾರತೀಯರನ್ನು ಆಫ್ರಿಕನ್ನರರಂತೆ, ಈಶಾನ್ಯ ಭಾರತೀಯರ ಚೀನಾದವರಂತೆ, ಉತ್ತರ ಭಾರತೀಯರನ್ನು ಅರಬ್ಬಿನವರಂತೆ ಕಾಣುತ್ತಾರೆ ಎಂದು ಹೇಳಿದ್ದರು" ಎಂದು ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.