ಕೇಂದ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆಯಾದ ಮೇನಕಾ ಗಾಂಧಿ ಆರೋಗ್ಯ ಸ್ಥಿತಿ ಗಂಭೀರವಾಗಿದ್ದರಿಂದ ಉತ್ತರಪ್ರದೇಶದ ಫಿಲಿಬಿಟ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಚಿವೆ ಮೇನಕಾ ಗಾಂಧಿ ತಮ್ಮ ಸಂಸದೀಯ ಕ್ಷೇತ್ರದಲ್ಲಿ ಸಭೆ ನಡೆಸುತ್ತಿರುವಾಗ ಹೊಟ್ಟೆ ನೋವು ಎಂದು ಸಭೆಯನ್ನು ಅರ್ಧಕ್ಕೆ ಮೊಟಕುಗೊಳಿಸಿ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಟ್ರಾಸೌಂಡ್ ಸ್ಕ್ಯಾನ್‌ನಲ್ಲಿ ಮೂತ್ರಕೋಶದಲ್ಲಿ ಕಲ್ಲುಗಳಿರುವುದು ದೃಢಪಡಿಸಲಾಗಿತ್ತು ಎನ್ನಲಾಗಿದೆ.
ಉತ್ತರಪ್ರದೇಶದ ಫಿಲಿಬಿಟ್ ನಗರದಿಂದ ವಿಮಾನದ ಮೂಲಕ ಅವರನ್ನು ದೆಹಲಿಗೆ ಕರೆತರಲಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ,
80 ವರ್ಷ ವಯಸ್ಸಿನ ಸಚಿವೆ ಮೇನಕಾ ಗಾಂಧಿ ಪ್ರಧಾನಿ ಮೋದಿ ಸಂಪುಟದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆಯನ್ನು ನಿರ್ವಹಿಸುತ್ತಿದ್ದಾರೆ.
\ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.