ನವದೆಹಲಿ : ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವನ್ನು ರದ್ದುಗೊಳಿಸುವ ಯಾವುದೇ ಪ್ರಸ್ತಾವನೆಯು ಪರಿಗಣನೆಯಲ್ಲಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.
ಕೇಂದ್ರ ಸರ್ಕಾರವು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವನ್ನು ರದ್ದುಪಡಿಸಿ, ಅದನ್ನು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದೊಂದಿಗೆ ವಿಲೀನಗೊಳಿಸುವ ಸಾಧ್ಯತೆಯಿದೆ ಎಂದು ಮಧ್ಯಮವೊಂದು ವರದಿ ಮಾಡಿತ್ತು.
ಇದಕ್ಕೆ ಪ್ರತಿಕ್ರಿಯೆಯಾಗಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ರೀ ಟ್ವೀಟ್ ಮಾಡಿ ಸ್ಪಷ್ಟ ಪಡಿಸಿದರು.