Webdunia - Bharat's app for daily news and videos

Install App

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ; ಚಿಕಿತ್ಸೆ ಫಲಿಸದೆ ಸಾವು

Webdunia
ಭಾನುವಾರ, 11 ನವೆಂಬರ್ 2018 (13:53 IST)
ಕೋಲ್ಕತ್ತಾ : ಕಿವಿ ಕೇಳದ,ಮಾತನಾಡಲು ಬಾರದ ಅಪ್ರಾಪ್ತ ಬಾಲಕಿಯ ಮೇಲೆ 18 ವರ್ಷದ ಯುವಕನೊಬ್ಬ  ಅತ್ಯಾಚಾರ ಎಸಗಿದ ಪರಿಣಾಮ ಬಾಲಕಿ ಸಾವನಪ್ಪಿದ ಘಟನೆ ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯ ಸಿಮುಲಿಯಾ ಪ್ರದೇಶದಲ್ಲಿ ನಡೆದಿದೆ.


ಸೋಮವಾರದಂದು ಬಾಲಕಿ ಮನೆಯ ಸಮೀಪದ ಶೌಚಾಲಯಕ್ಕೆ ಹೋಗಿದಾಗ ಯುವಕನೊಬ್ಬ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದ. ಈ ವಿಚಾರವನ್ನು ಆಕೆ ಯಾರ ಬಳಿಯೂ ತಿಳಿಸಿರಲಿಲ್ಲ. ಆದರೆ ಬಾಲಕಿಗೆ ಮೂತ್ರದ ಸಮಸ್ಯೆಯಿಂದ ಅಸ್ವಸ್ಥಳಾದಾಗ  ತಾಯಿ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದು ಪರೀಕ್ಷೆ ಮಾಡಿಸಿದಾಗ ವೈದ್ಯರು, ಆಕೆಯ ಮೇಲೆ ಅತ್ಯಾಚಾರ ನಡೆದಿರುವುದಾಗಿ ತಿಳಿಸಿದ್ದಾರೆ.


ಆಗ ಗಾಬರಿಗೊಂಡ ಪೋಷಕರು ಅಸ್ವಸ್ಥಗೊಂಡ ಬಾಲಕಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೆ ಬಾಲಕಿ ಶುಕ್ರವಾರ ಮೃತಪಟ್ಟಿದ್ದಾಳೆ.


ಈ ಘಟನೆಗೆ ಸಂಬಂಧಿಸಿದಂತೆ ಪೋಷಕರು ಪೊಲೀಸರಿಗೆ ದೂರು ನೀಡಿದ ಹಿನ್ನಲೆಯಲ್ಲಿ ಅತ್ಯಾಚಾರ ಎಸಗಿದ್ದ 18 ವರ್ಷದ ಯುವಕನನ್ನು ಶುಕ್ರವಾರ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments