Publish Date: Sat, 17 Apr 2021 (07:23 IST)
Updated Date: Sat, 17 Apr 2021 (07:27 IST)
ಬುಲಂದ್ ಶಹರ್ : ಮಹಿಳೆಯ ಪ್ರಜ್ಞೆ ತಪ್ಪಿಸಿ ಆಕೆಯ ಮೇಲೆ ಮಾನಭಂಗ ಎಸಗಿ ಅದನ್ನು ವಿಡಿಯೋ ಮಾಡಿ ಬ್ಲ್ಯಾಕ್ ಮೇಲ್ ಮಾಡಿದ ಘಟನೆ ಉತ್ತರಪ್ರದೇಶದ ಬುಲಂದ್ ಶಹರ್ ಜಿಲ್ಲೆಯಲ್ಲಿ ನಡೆದಿದೆ.
ಮಹಿಳೆಗೆ ಪರಿಚಿತರಾದ ಆರೋಪಿಗಳು ಅವಳ ಮನೆಗೆ ಬಂದು ಆಹಾರದಲ್ಲಿ ನಿದ್ರಾಜನಕ ಮಾತ್ರೆಗಳನ್ನು ಸೇರಿಸಿ ಅದನ್ನು ಮಹಿಳೆಗೆ ತಿನ್ನಿಸಿದ್ದಾರೆ. ಇದರಿಂದ ಪ್ರಜ್ಞೆ ಕಳೆದುಕೊಂಡ ಮಹಿಳೆಯ ಮೇಲೆ ಮಾನಭಂಗ ಎಸಗಿ ಅದನ್ನು ವಿಡಿಯೋ ಮಾಡಿಕೊಂಡು ಮಹಿಳೆಯ ಬಳಿ 5 ಲಕ್ಷ ರೂ ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡಿದ್ದಾರೆ.
ಈ ಬಗ್ಗೆ ಮಹಿಳೆ ಆರೋಪಿಗಳ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.