ಪ್ರಧಾನಮಂತ್ರಿ ನರೇಂದ್ರ ಮೋದಿ ಸಚಿವ ಸಂಪುಟ ಸಭೆಯ ಮಾಹಿತಿಗಳು ಬಹಿರಂಗವಾಗುವ ಸಾಧ್ಯತೆಗಳ ಹಿನ್ನೆಲೆಯಲ್ಲಿ, ಮೊಬೈಲ್ ಫೋನ್‌ಗಳ ಬಳಕೆಗೆ ನಿಷೇಧ ಹೇರಿ ಕೇಂದ್ರ ಸರಕಾರ ಆದೇಶ ಹೊರಡಿಸಿದೆ.
ಕೇಂದ್ರ ಸಚಿವಾಲಯದ ಸಂಪುಟ ಕಾರ್ಯದರ್ಶಿ ಸಚಿವರುಗಳ ಆಪ್ತರಿಗೆ ಮಾಹಿತಿ ರವಾನಿಸಿ, ಸಚಿವ ಸಂಪುಟ ಸಭೆಯಲ್ಲಿ ಮೊಬೈಲ್ ತರುವುದನ್ನು ನಿಷೇಧಿಸಲಾಗಿದೆ ಎಂದು ನಿರ್ದೇಶನ ನೀಡಿದೆ.
ಸಚಿವ ಸಂಪುಟ ಸಭೆ ನಡೆಯುವ ಸ್ಥಳಗಳಲ್ಲಿ ಸ್ಮಾರ್ಟ್‌ಫೋನ್ ಮತ್ತು ಮೊಬೈಲ್ ಫೋನ್‌ಗಳ ಬಳಕೆಗೆ ನಿಷೇಧ ಹೇರಲಾಗಿದ್ದರಿಂದ ಕೇಂದ್ರ ಸಚಿವರು ಕೂಡಾ ಸರಕಾರದ ಆದೇಶವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಪ್ರಕಟಣೆ ಹೊರಡಿಸಿದೆ.
ಕೇಂದ್ರ ಸರಕಾರ ಸಚಿವ ಸಂಪುಟ ಸಭೆಯಲ್ಲಿ ಕೇಂದ್ರ ಸಚಿವರು ಮೊಬೈಲ್ ತರದಂತೆ ಮೊದಲ ಬಾರಿಗೆ ನಿಷೇಧ ಹೇರಿ ಆದೇಶ ಹೊರಡಿಸಿದೆ.
ಇದಕ್ಕಿಂತ ಮೊದಲು ಕೇಂದ್ರ ಸಚಿವರು ಸಚಿವ ಸಂಪುಟ ಸಭೆಯಲ್ಲಿ ತಮ್ಮ ತಮ್ಮ ಮೊಬೈಲ್‌ಗಳನ್ನು ಸ್ವಿಚ್ ಆಫ್ ಅಥವಾ ಸೈಲೆಂಟ್ ಮೋಡ್‌ನಲ್ಲಿಡುವಂತೆ ಆದೇಶ ನೀಡಲಾಗಿತ್ತು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ