Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ರಾಜ್ಯವೇ ರೈತರ ಸಾಲ ಮನ್ನಾ ಮಾಡಬೇಕು, ನಾವು ಮಾಡೋಲ್ಲ ಎಂದ ಮೋದಿ ಸರಕಾರ

ರಾಜ್ಯವೇ ರೈತರ ಸಾಲ ಮನ್ನಾ ಮಾಡಬೇಕು, ನಾವು ಮಾಡೋಲ್ಲ ಎಂದ ಮೋದಿ ಸರಕಾರ
ನವದೆಹಲಿ , ಶುಕ್ರವಾರ, 7 ಏಪ್ರಿಲ್ 2017 (16:12 IST)
ಕೇಂದ್ರ ಸರಕಾರದ ಬಳಿ ರೈತರ ಸಾಲ ಮನ್ನಾ ಮಾಡುವ ಯಾವುದೇ ಪ್ರಸ್ತಾವನೆಯಿಲ್ಲ. ರಾಜ್ಯ ಸರಕಾರವೇ ಸಾಲ ಮನ್ನಾ ಮಾಡಬೇಕು ಎಂದು ಹೇಳಿದೆ.
 
ಇಂದು ನಡೆದ ಲೋಕಸಭೆ ಅಧಿವೇಶನದಲ್ಲಿ ರಾಜ್ಯದ ವಿಷಯ ಪ್ರಸ್ತಾಪಿಸಿದ ಕಾಂಗ್ರೆಸ್ ಸಂಸದ ಬಿ.ಕೆ.ಹರಿಪ್ರಸಾದ್, ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿದ್ದರಿಂದ ಕೇಂದ್ರ ಸರಕಾರ ರೈತರ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.
 
ಉತ್ತರಪ್ರದೇಶದಲ್ಲಿ ರಾಜ್ಯ ಸರಕಾರವೇ ಒಂದು ಲಕ್ಷ ರೂಪಾಯಿಗಳವರೆಗಿನ ರೈತರ ಸಾಲ ಮನ್ನಾ ಮಾಡಿದೆ.ಅದರಲ್ಲಿ ಕೇಂದ್ರ ಸರಕಾರದ ಯಾವುದೇ ಪಾಲಿಲ್ಲ ಎಂದು ಕೇಂದ್ರ ಸ್ಪಷ್ಟನೆ ನೀಡಿದೆ.
 
ಮತ್ತೊಂದೆಡೆ, ಕೇಂದ್ರ ಸರಕಾರ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿರುವ ರೈತರ ಸಾಲ ಮನ್ನಾ ಮಾಡಿದಲ್ಲಿ ರಾಜ್ಯ ಸರಕಾರ ಸಹಕಾರಿ ಸಂಘಗಳಲ್ಲಿರುವ ರೈತರ ಸಾಲ ಮನ್ನಾ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಶಿವಸೇನೆ ಸಂಸದ ರವೀಂದ್ರ ಗಾಯಕ್‌ವಾಡ್ ಮೇಲಿನ ನಿಷೇಧ ವಾಪಸ್