ತಿರುವನಂತಪುರಂ : 2 ದಿನಗಳ ಕೇರಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ತಿರುವನಂತಪುರಂ ಹಾಗೂ ಕಾಸರಗೋಡು ನಡುವೆ ಸಂಚರಿಸುವ ರಾಜ್ಯದ ಮೊದಲ ವಂದೇ ಭಾರತ್ ರೈಲಿಗೆ ಹಾಗೂ ದೇಶದ ಮೊದಲ ವಾಟರ್ ಮೆಟ್ರೋಗೆ ಚಾಲನೆ ನೀಡಿದ್ದಾರೆ.
ಮಂಗಳವಾರ ಬೆಳಗ್ಗೆ 11:10ರ ವೇಳೆಗೆ ತಿರುವನಂತಪುರಂ ಸೆಂಟ್ರಲ್ ಸ್ಟೇಷನ್ನಿಂದ ವಂದೇ ಭಾರತ್ ರೈಲಿಗೆ ಮೋದಿ ಚಾಲನೆ ನೀಡಿದ್ದಾರೆ. ಬಳಿಕ ಕೊಚ್ಚಿಗೆ ತೆರಳಿ ದೇಶದ ಮೊದಲ ವಾಟರ್ ಮೆಟ್ರೋಗೆ ಮೋದಿ ಚಾಲನೆ ನೀಡಿದರು.
ಕೇರಳದ ಮೊದಲ ವಂದೇ ಭಾರತ್ ರೈಲು ರಾಜಧಾನಿ ತಿರುವನಂತಪುರಂ, ಕೊಲ್ಲಂ, ಕೊಟ್ಟಾಯಂ, ಎರ್ನಾಕುಲಂ, ತ್ರಿಶ್ಯೂರ್, ಪಾಲಕ್ಕಾಡ್, ಪತ್ತನಂತಿಟ್ಟ, ಮಲಪ್ಪುರಂ, ಕೋಝಿಕ್ಕೋಡ್, ಕಣ್ಣೂರು, ಕಾಸರಗೋಡು ಹೀಗೆ ಒಟ್ಟು 11 ಜಿಲ್ಲೆಗಳಲ್ಲಿ ಸಂಚರಿಸಲಿದೆ ಎಂದು ಪ್ರಧಾನ ಮಂತ್ರಿಗಳ ಕಚೇರಿ ತಿಳಿಸಿದೆ.