Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಬಿಹಾರ್ ಸಿಎಂ ನಿತೀಶ್ ಕುಮಾರ್‌ರನ್ನು ಹಾಡಿ ಹೊಗಳಿದ ಪ್ರಧಾನಿ ಮೋದಿ

ಬಿಹಾರ್ ಸಿಎಂ ನಿತೀಶ್ ಕುಮಾರ್‌ರನ್ನು ಹಾಡಿ ಹೊಗಳಿದ ಪ್ರಧಾನಿ ಮೋದಿ
ಪಾಟ್ನಾ , ಗುರುವಾರ, 5 ಜನವರಿ 2017 (18:54 IST)
ನೋಟು ನಿಷೇಧ ಕುರಿತಂತೆ ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್, ಕೇಂದ್ರ ಸರಕಾರವನ್ನು ಹೊಗಳಿದ ಕೆಲ ವಾರಗಳ ನಂತರ, ಇದೀಗ ಪ್ರಧಾನಿ ಮೋದಿ, ರಾಜ್ಯದಲ್ಲಿ ಮದ್ಯ ನಿಷೇಧಿಸಿರುವುದಕ್ಕಾಗಿ ನಿತೀಶ್ ಕುಮಾರ್‌ರನ್ನು ಹೊಗಳಿದ್ದಾರೆ.
 
ಮದ್ಯ ಮಾರಾಟದ ವಿರುದ್ಧ ಕಠಿಣ ಕ್ರಮಕೈಗೊಂಡು ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ನಿಷೇಧ ಹೇರಿದ ನಿತೀಶ್‌ಕುಮಾರ್‌ರನ್ನು ಹೃದಯಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಪ್ರಧಾನಿ ಮೋದಿ ಹೊಗಳಿದ್ದಾರೆ.
 
10ನೇ ಸಿಖ್ ಗುರು ಗೋವಿಂದ್ ಸಿಂಗ್ ಅವರ 350ನೇ ಪ್ರಕಾಶ್ ಪರ್ವ ಕಾರ್ಯಕ್ರಮಕ್ಕೆ ಆಗಮಿಸಿದ್ದ ಪ್ರಧಾನಿ ಮೋದಿ, ಬಿಹಾರ್ ಸಿಎಂ ನಿತೀಶ್ ಕುಮಾರ್, ಆರ್‌ಜೆಡಿ ಮುಖ್ಯಸ್ಥ ಲಾಲು ಯಾದವ್ ಅವರೊಂದಿಗೆ ವೇದಿಕೆ ಹಂಚಿಕೊಂಡರು. 
 
ಬಿಹಾರ್ ಸಿಎಂ ನಿತೀಶ್ ಕುಮಾರ್ ಒಬ್ಬರಿಂದಲೇ ಅಥವಾ ಒಂದು ಪಕ್ಷದಿಂದಲೇ ಮದ್ಯ ವಿರೋಧ ಹೋರಾಟ ಯಶಸ್ವಿಯಾಗುವುದಿಲ್ಲ. ಎಲ್ಲಾ ರಾಜಕೀಯ ಪಕ್ಷಗಳು, ಸಾಮಾಜಿಕ ಸಂಘಟನೆಗಳು ಮತ್ತು ನಾಗರಿಕರು ಜನಾಂದೋಲನ ರೂಪಿಸಬೇಕು ಎಂದು ಕರೆ ನೀಡಿದರು.
 
ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಸಂಪೂರ್ಣವಾಗಿ ನಿಷೇಧ ಹೇರಿದ ಬಿಹಾರ್ ರಾಜ್ಯ, ದೇಶದ ಇತರ ರಾಜ್ಯಗಳಿಗೆ ಮಾದರಿಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಿಯಕರನ ಜತೆ ಸೇರಿ ಪತ್ನಿಯಿಂದ 12 ವರ್ಷಗಳಿಂದ ಜೀವ ಬೆದರಿಕೆ