Publish Date: Sun, 16 Jan 2022 (13:14 IST)
Updated Date: Sun, 16 Jan 2022 (13:16 IST)
ನವದೆಹಲಿ : ಭಾರತದಲ್ಲಿ ಲಸಿಕೆ ಅಭಿಯಾನ ಪ್ರಾರಂಭವಾಗಿ ಇಂದಿಗೆ ಒಂದು ವರ್ಷ ಪೂರ್ಣಗೊಂಡಿದೆ. ಈ ಹಿನ್ನೆಲೆಯಲ್ಲಿ ಟ್ವಿಟ್ಟರ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಈ ಸಮಯದಲ್ಲಿ ಸಹಾಯ ಮಾಡಿದ ಎಲ್ಲಾ ಕಾರ್ಯಕರ್ತರಿಗೂ ಧನ್ಯವಾದವನ್ನು ತಿಳಿಸುತ್ತೇನೆ. ಇವರ ಸೇವಾ ಕಾರ್ಯಕ್ಕೆ ಹೆಮ್ಮೆಯೆನಿಸುತ್ತದೆ. ನಾವು ಕೊರೊನಾ ಮಾರ್ಗಸೂಚಿಗಳನ್ನು ಅನುಸರಿಸಿ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡೋಣ ಎಂದು ಟ್ವಿಟ್ಟರ್ ನಲ್ಲಿ ಕರೆ ನೀಡಿದ್ದಾರೆ.
ಕೇಂದ್ರ ಆರೋಗ್ಯ ಸಚಿವ ಡಾ. ಮನ್ಸುಖ್ ಮಾಂಡವಿಯಾ ಕೂಡ ಈ ಬಗ್ಗೆ ಟ್ವೀಟ್ ಮಾಡಿ ವಿಶ್ವದಲ್ಲೇ ಇದು ಅತ್ಯಂತ ಯಶಸ್ವಿಯಾಗಿದೆ ಎಂದು ತಿಳಿಸಿದ್ದಾರೆ.
ಕಳೆದ ವರ್ಷ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಾಂಡವಿಯಾ ಪ್ರಶಂಸಿಸಿದ್ದಾರೆ. ಈ ಬಗ್ಗೆ ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
Ramya kosira
Publish Date: Sun, 16 Jan 2022 (13:14 IST)
Updated Date: Sun, 16 Jan 2022 (13:16 IST)