ಡೆಹ್ರಾಡೂನ್ : ಉತ್ತರಾಖಂಡ ವಿಧಾನಸಭಾ ಚುನಾವಣೆಯ ದಿನಾಂಕ ಸಮೀಪಿಸುತ್ತಿದ್ದಂತೆ ಇಲ್ಲಿ ರಾಜಕೀಯ ತಳಮಳ ತೀವ್ರಗೊಳ್ಳುತ್ತಿದೆ.
ಸದ್ಯ ಚುನಾವಣಾ ಪ್ರಚಾರ ಜೋರಾಗಿದ್ದು, ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಬಿಜೆಪಿ ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ರಾಜ್ಯದಿಂದ ಹಿಡಿದು ಕೇಂದ್ರದವರೆಗೆ ಎಲ್ಲಾ ನಾಯಕರು ಈ ನಿಟ್ಟಿನಲ್ಲಿ ಶಕ್ತಿ ಮೀರಿ ಯತ್ನಿಸುತ್ತಿದ್ದಾರೆ.
ಏತನ್ಮಧ್ಯೆ, ಗುರುವಾರ, ಪ್ರಧಾನಿ ನರೇಂದ್ರ ಮೋದಿ ಅವರು ದೇವಭೂಮಿಯ ಮತದಾರರನ್ನು ತಮ್ಮ ಪರ ಸೆಳೆಯಲು ಶ್ರೀನಗರ ಗಡ್ವಾಲ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಈ ಹಿಂದೆ ಅವರು ರಾಜ್ಯದ ಹಲವು ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದ್ದರು. ಅಲ್ಲದೇ ಇಲ್ಲಿ ಅವರು ಈಗಾಗಲೇ ವರ್ಚುವಲ್ ರ್ಯಾಲಿ ಮಾಡಲಿದ್ದಾರೆ. ಆದರೆ ಕೊನೆ ಕ್ಷಣದಲ್ಲಿ ಭೌತಿಕ ಸಭೆ ನಡೆಸಲು ತೀರ್ಮಾನಿಸಲಾಗಿದೆ.