Select Your Language

Notifications

webdunia
webdunia
webdunia
webdunia

ಮೋದಿಯವರೇ ಪೂರ್ಣ ಪ್ರಮಾಣದಲ್ಲಿ ಪ್ರಧಾನಿಯಾಗಲಿದ್ದಾರೆ: ಅಮಿತ್ ಶಾ

Amith Shah

Sampriya

ಹೈದರಬಾದ್‌ , ಶನಿವಾರ, 11 ಮೇ 2024 (19:22 IST)
ಹೈದರಬಾದ್‌: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ ಬಂದರೆ ಪ್ರಧಾನಿ ಮೋದಿ ಅವರೇ ಪ್ರಧಾನಿಯಾಗಿ ಅವಧಿ ಪೂರ್ಣಗೊಳಿಸಲಿದ್ದಾರೆ ಎಂದು ಗೃಹಸಚಿವ ಅಮಿತ್ ಶಾ ಅವರು ಅರವಿಂದ ಕೇಜ್ರಿವಾಲ್‌ ಹೇಳಿಕೆಗೆ ಪ್ರತಿಕ್ರಿಯಿಸಿದರು.

ಜೈಲಿನಿಂದ ಹೊರಬಂದ ಕೇಜ್ರಿವಾಲ್ ಅವರು ಮಾತನಾಡಿ, ಈ ವರ್ಷ ಸೆಪ್ಟೆಂಬರ್‌ನಲ್ಲಿ ಪ್ರಧಾನಿ ಮೋದಿ ಅವರು 75ನೇ ವರ್ಷಕ್ಕೆ ಕಾಲಿಡುತ್ತಿದ್ದು, ಪಕ್ಷದ ನಿಯಮದ ಪ್ರಕಾರ ಅವರು ಪ್ರಧಾನಿಯಾಗಿ ಮುಂದುವರಿಯಲು ಸಾಧ್ಯವಿಲ್ಲ. ಮೋದಿ ಬದಲು ಶಾ ಅವರು ಪ್ರಧಾನಿಯಾಗುತ್ತಾರೆ ಎಂದು ಹೇಳಿದ್ದರು.  

ಈ ಹೇಳಿಕೆಗೆ ತಿರುಗೇಟು ನೀಡಿದ ಅಮಿತ್ ಶಾ ಅವರು,  ಮೋದಿ ಅವರಿಗೆ 75 ತುಂಬುತ್ತಿರುವುದಕ್ಕೆ ನೀವು(ಕೇಜ್ರಿವಾಲ್‌) ಸಂತೋಷಪಡುವ ಅಗತ್ಯವಿಲ್ಲ. 75 ವರ್ಷ ಆದ ನಂತರ ಅಧಿಕಾರದಲ್ಲಿ ಮುಂದುವರೆಯಬಾರದು ಎಂದು ಬಿಜೆಪಿಯ ಸಂವಿಧಾನದಲ್ಲಿ ಎಲ್ಲಿಯೂ ಬರೆದಿಲ್ಲ. ಮೋದಿ ಅವರು ತಮ್ಮ ಆಡಳಿತಾವಧಿಯನ್ನು ಪೂರ್ಣಗೊಳಿಸುತ್ತಾರೆ ಮತ್ತು ಮುಂದಿನ ಬಾರಿಯೂ ಅವರೇ ಪ್ರಧಾನಿಯಾಗಿ ಮುಂದುವರೆಯುತ್ತಾರೆ. ಈ ಬಗ್ಗೆ ಬಿಜೆಪಿಯಲ್ಲಿ ಯಾವುದೇ ಗೊಂದಲವಿಲ್ಲ ಎಂದು ತಿರುಗೇಟು ನೀಡಿದರು.

Share this Story:

Follow Webdunia kannada

ಮುಂದಿನ ಸುದ್ದಿ

ವಿಧಾನಪರಿಷತ್ ಚುನಾವಣೆಯಲ್ಲೂ ಜೆಡಿಎಸ್ ಜತೆ ದೋಸ್ತಿ ಮುಂದುವರೆಸಲಿರುವ ಬಿಜೆಪಿ