ದೇಶದೆಲ್ಲೆಡೆ ದೀಪಾವಳಿ ಸಂಭ್ರಮ ಮನೆ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ ದೇಶವಾಸಿಗಳಿಗೆ ದೀಪಾವಳಿ ಶುಭಾಶಯ ಕೋರಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು 'ದೀಪಾವಳಿಯ ಮಂಗಳಕರ ಸಮಯದಲ್ಲಿ ದೇಶವಾಸಿಗಳಿಗೆ ಶುಭ ಹಾರೈಕೆಗಳು', ಎಂದು ಅವರು ಟ್ವೀಟ್ ಮಾಡಿದ್ದಾರೆ.
ರೇಡಿಯೋ ಕಾರ್ಯಕ್ರಮ ಮನ್ ಕೀ ಬಾತ್ ನಲ್ಲಿ ಸಹ ದೇಶವಾಸಿಗಳಿಗೆ ಹಬ್ಬದ ಶುಭಾಶಯ ತಿಳಿಸಿದ ಅವರು, ನಮ್ಮ ಧೀರ ಯೋಧರ ಹೆಸರಲ್ಲಿ ದೀಪ ಬೆಳಗಿಸಿ ರಾಷ್ಟ್ರ ರಕ್ಷಣೆಯಲ್ಲಿ ತೊಡಗಿರುವ ಯೋಧರಿಗೆ ಈ ಹಬ್ಬವನ್ನು ಸಮರ್ಪಿಸೋಣ ಎಂದಿದ್ದಾರೆ.
ಶುಕ್ರವಾರದಿಂದ ದೇಶಾದ್ಯಂತ ದೀಪಾವಳಿಯನ್ನು ಆಚರಿಸುತ್ತಿದ್ದು ಮನದ ಅಂಧಕಾರವನ್ನು ತೊಲಗಿಸಿ ಬೆಳಕಿನತ್ತ ಸಾಗುವ ಸಂಕೇತವಾಗಿ ಈ ಹಬ್ಬವನ್ನು ಆಚರಿಸಲಾಗುತ್ತದೆ. ಹಿಂದೂಗಳ ಪವಿತ್ರ ಹಬ್ಬವಾದ ಇದನ್ನು ನಾಲ್ಕೈದು ದಿನಗಳ ಕಾಲ ಆಚರಿಸಲ್ಪಡುತ್ತದೆ.
ಭಾರತ- ಚೀನಾ ಗಡಿಯಲ್ಲಿ ಐಟಿಬಿಪಿ ಯೋಧರಿಗೆ ಸಿಹಿ ಹಂಚುವ ಮೂಲಕ ಪ್ರಧಾನಿ ದೀಪಾವಳಿಯನ್ನು ಆಚರಿಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ