Webdunia - Bharat's app for daily news and videos

Install App

ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರ ಖಾತೆಗೆ ಹಾಕಲಾದ ಹಣ ವಾಪಾಸ್; ಸ್ಪೋಟಕ ಮಾಹಿತಿ ಬಹಿರಂಗ

Webdunia
ಶುಕ್ರವಾರ, 3 ಮೇ 2019 (09:40 IST)
ನವದೆಹಲಿ : ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರ ಬ್ಯಾಂಕ್ ಖಾತೆಗೆ ಹಾಕಿದ ಹಣ ಕೆಲವೇ ಗಂಟೆಗಳಲ್ಲಿ ಹಿಂಪಡೆಯಲಾಗಿದೆ ಎಂಬ ಮಾಹಿತಿ ಇದೀಗ ಬಯಲಾಗಿದೆ.



ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರ ಬ್ಯಾಂಕ್ ಖಾತೆಗೆ ಪ್ರತಿ ವರ್ಷ 6,000 ರೂ ಗಳನ್ನು ತಲಾ 2000 ರೂ.ನಂತೆ 3 ಕಂತುಗಳಲ್ಲಿ ರೈತರ ಖಾತೆಗೆ ಹಣವನ್ನು ಜಮಾ ಮಾಡಲಾಗುವುದು ಎಂದು ತಿಳಿಸಿದ್ದರು. ಅದರಂತೆ ಯೋಜನೆಯ ಮೊದಲ ಕಂತಿನ ರೂಪದಲ್ಲಿ ರೈತರ ಬ್ಯಾಂಕ್ ಖಾತೆಗೆ 2000 ರೂ ಹಾಕಲಾಗಿತ್ತು. ಆದರೆ ಹಾಕಿದ ಕೆಲವೇ ದಿನಗಳಲ್ಲಿ ಹಣ ವಾಪಸ್ ಪಡೆದುಕೊಳ್ಳಲಾಗಿದೆ ಎಂದು ರೈತರು ಆರೋಪಿಸಿದ್ದು, ಮಾಹಿತಿ ಹಕ್ಕು ಕಾಯ್ದೆಯಡಿ ಆನ್ ಲೈನ್ ಸುದ್ದಿ ಜಾಲ ತಾಣ 'ದಿ ವೈರ್' ಪಡೆದ ಮಾಹಿತಿಯಲ್ಲಿ  ಈ ವಿಚಾರ ಬಹಿರಂಗವಾಗಿದೆ.


ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಸಿಂಡಿಕೇಟ್ ಬ್ಯಾಂಕ್, ಕೆನರಾ ಬ್ಯಾಂಕ್ ಸೇರಿದಂತೆ ಅನೇಕ ರಾಷ್ಟ್ರೀಕೃತ ಬ್ಯಾಂಕ್ ಗಳು ಈ ಯೋಜನೆಯಡಿ ಅನೇಕ ಫಲಾನುಭವಿಗಳ ಖಾತೆಗೆ ಹಾಕಲಾಗಿದ್ದ ಹಣವನ್ನು ಕಡಿತ ಮಾಡಲಾಗಿದೆ ಎಂದು ತಿಳಿಸಿವೆ.  ಆದರೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಸುಮಾರು 3 ಕೋಟಿ ರೈತರ ಖಾತೆಗಳಿಗೆ ಹಣ ಜಮಾ ಮಾಡಲಾಗಿದೆ. ಹಣ ವಾಪಸ್ ಪಡೆದ ಬಗ್ಗೆ ಮಾಹಿತಿ ಇಲ್ಲ ಎಂದು ಕೃಷಿ ಸಚಿವಾಲಯ ಹೇಳಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments