Publish Date: Sun, 29 Oct 2023 (08:52 IST)
Updated Date: Sun, 29 Oct 2023 (08:55 IST)
ಮುಂಬೈ: ರಿಲಯನ್ಸ್ ಮುಖ್ಯಸ್ಥ ಖ್ಯಾತ ಉದ್ಯಮಿ ಮುಕೇಶ್ ಅಂಬಾನಿಗೆ ಕೊಲೆ ಬೆದರಿಕೆ ಹಾಕಲಾಗಿದ್ದು 20 ಕೋಟಿಗೆ ಬೇಡಿಕೆಯಿಟ್ಟಿದ್ದಾರೆ.
ಈಮೇಲ್ ಮೂಲಕ ಮುಕೇಶ್ ಅಂಬಾನಿಗೆ ಕೊಲೆ ಬೆದರಿಕೆ ಹಾಕಿದ ವ್ಯಕ್ತಿ 20 ಕೋಟಿ ರೂ.ಗೆ ಬೇಡಿಕೆಯಿಟ್ಟಿದ್ದ. ಹಣ ಕೊಡದೇ ಇದ್ದರೆ ನಿಮ್ಮನ್ನು ಕೊಲ್ಲುತ್ತೇವೆ, ನಮ್ಮ ಬಳಿ ಭಾರತದ ಅತ್ಯುತ್ತಮ ಶೂಟರ್ ಗಳಿದ್ದಾರೆ ಎಂದು ಬೆದರಿಕೆ ಹಾಕಲಾಗಿದೆ.
ಅಂಬಾನಿ ನಿವಾಸದ ಭದ್ರತಾ ಅಧಿಕಾರಿಗಳಿಗೆ ಈ ಮಾಹಿತಿ ಬಂದಿದೆ. ಈ ಹಿನ್ನಲೆಯಲ್ಲಿ ಅವರು ಪೊಲೀಸರಿಗೆ ದೂರು ನೀಡಿದ್ದರು. ಈ ಬಗ್ಗೆ ಪೊಲೀಸರು ದೂರು ದಾಖಲಿಸಿದ್ದು, ತನಿಖೆ ನಡೆಸುತ್ತಿದ್ದಾರೆ.