ನಗರದ ಉನಾ ಬಂದರು ಬಳಿ ಕಪ್ಪು ಬಟ್ಟೆ ಧರಿಸಿದ್ದ ಇಬ್ಬರು ಶಸ್ತ್ರಸಜ್ಜಿತ ವ್ಯಕ್ತಿಗಳು ಕಾಣಿಸಿಕೊಂಡಿದ್ದಾರೆ ಎನ್ನುವ ವರದಿಗಳ ಹಿನ್ನೆಲೆಯಲ್ಲಿ ಮುಂಬೈ ನಗರವನ್ನು ಹೈ ಅಲರ್ಟ್ ಘೋಷಿಸಲಾಗಿದೆ.
ಇಬ್ಬರು ವ್ಯಕ್ತಿಗಳು ಕಪ್ಪು ಬಟ್ಟೆ ಧರಿಸಿ ಶಸ್ತ್ರಸಜ್ಜಿತರಾಗಿ ಅನುಮಾನಾಸ್ಪದ ರೀತಿಯಲ್ಲಿ ತಿರುಗಾಡುತ್ತಿದ್ದಾರೆ ಎಂದು ಶಾಲಾ ಬಾಲಕರು, ನೌಕೌಸೇನೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಭಾರಿ ಶೋಧ ಕಾರ್ಯ ಆರಂಭಿಸಲಾಗಿದೆ.
ಮುಂಬೈ , ನವೀ ಮುಂಬೈ, ಠಾಣೆ ಮತ್ತು ರಾಯಗಢ್ ಪ್ರದೇಶದಲ್ಲಿ ಭಯೋತ್ಪಾದನೆ ನಿಗ್ರಹ ದಳ ವಿಶೇಷ ಹುಡುಕಾಟ ನಡೆಸಿದೆ. ನೌಕಾಸೇನೆಯ ಅಧಿಕಾರಿಗಳು ಕೂಡಾ ಜಂಟಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಭಯೋತ್ಪಾದನಾ ನಿಗ್ರಹ ದಳದ ಅಧಿಕಾರಿಗಳ ತಂಡ ಹೆಲಿಕಾಪ್ಟರ್ ಮೂಲಕ ಅಭೂತಪೂರ್ವ ಎನ್ನುವಂತಹ ಶೋಧ ಕಾರ್ಯದಲ್ಲಿ ತೊಡಗಿದೆ ಎಂದು ನೌಕಾ ಸೇನೆಯ ಅಧಿಕಾರಿಗಳು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ