ನವದೆಹಲಿ: ಕೇಂದ್ರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿ ಅಧಿಕಾರ ವಹಿಸಿಕೊಂಡಿರುವ ಜೆ.ಪಿ. ನಡ್ಡಾ ಅವರು ಬಿಜೆಪಿ ಪಕ್ಷದ ರಾಷ್ಟ್ರಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ನಡ್ಡಾ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ಬಿಜೆಪಿಯ ಮುಂದಿನ ರಾಷ್ಟ್ರಾಧ್ಯಕ್ಷ ಯಾರಾಗಲಿದ್ದಾರೆ ಎನ್ನುವ ಕುತೂಹಲ ಎದುರಾಗಿದೆ. ಪ್ರಭಾವಿ ರಾಷ್ಟ್ರಾಧ್ಯಕ್ಷ ರೇಸ್‌ಗೆ ಸಾಕಷ್ಟು ಹೆಸರುಗಳು ಕೇಳಿಬಂದಿದೆ.
ಜೂನ್ ಕೊನೆಯಲ್ಲಿ ಬಿಜೆಪಿ ಹೊಸ ರಾಷ್ಟ್ರಾಧ್ಯಕ್ಷರ ಆಯ್ಕೆ ಮಾಡುವ ಸಾಧ್ಯತೆ ಇದೆ. ಬಿಜೆಪಿ ಅಧ್ಯಕ್ಷ ಹುದ್ದೆ ರೇಸ್ನಲ್ಲಿ ಐವರು ಹಿರಿಯ ನಾಯಕರಿದ್ದಾರೆ. ಸುನಿಲ್ ಬನ್ಸಾಲ್, ವಿನೋದ್ ತಾವ್ಡೆ, ಮಾಜಿ ಸ್ಪೀಕರ್ ಓಂ ಬಿರ್ಲಾ, ಓಂ ಮಾಥುರ್, ಅನುರಾಗ್ ಟಾಕೂರ್ ಹೆಸರುಗಳು ಚರ್ಚೆ ಆಗುತ್ತಿದೆ. ಜತೆಗೆ ಲೋಕಸಭಾ ಚುನಾವಣೆಯಲ್ಲಿ ಪರಾಭವಗೊಂಡ ಸ್ಮೃತಿ ಇರಾನಿ ಅವರ ಹೆಸರೂ ಕೇಳಿಬರುತ್ತಿದೆ.
ಈ ಐವರೂ ಕೂಡ ಬಿಜೆಪಿಯಲ್ಲಿ ಸಂಘಟನಾತ್ಮಕವಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಇನ್ನು ವಿನೋದ್ ತಾವ್ಡೆ ಪ್ರಸ್ತುತ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯೂ ಆಗಿದ್ದಾರೆ. ಸುನಿಲ್ ಬನ್ಸಾಲ್ ಕೂಡ ಈ ಸ್ಥಾನಕ್ಕೆ ಫೇವರಿಟ್ ಆಗಿದ್ದಾರೆ ಎನ್ನಲಾಗಿದೆ.