ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ನಾಗಾಲ್ಯಾಂಡ್ ಮುಖ್ಯಮಂತ್ರಿ ಟಿ.ಆರ್.ಜೆಲಿಯಾಂಗ್ ತಮ್ಮ ಸ್ಥಾನವನ್ನು ತ್ಯಜಿಸಿದ್ದಾರೆ.
ಜೆಲಿಯಾಂಗ್ ಅವರ ರಾಜೀನಾಮೆಯನ್ನು ರಾಜ್ಯಪಾಲ ಪಿ.ಬಿ. ಆಚಾರ್ಯ ಅಂಗೀಕರಿಸಿದ್ದಾರೆ.
ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ನೀಡಲಾಗಿರುವ ಮೀಸಲಾತಿಯನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ವಿವಿಧ ಬುಡಕಟ್ಟು ಸಂಘಟನೆಗಳು ಶುಕ್ರವಾರದೊಳಗೆ ರಾಜೀನಾಮೆ ನೀಡದಿದ್ದರೆ ಪ್ರತಿಭಟನೆಯನ್ನು ತೀವ್ರಗೊಳಿಸುವ ಎಚ್ಚರಿಕೆ ನೀಡಿದ್ದವು. ಈ ಹಿನ್ನೆಲೆಯಲ್ಲಿ ಜೆಲಿಯಾಂಗ್ ರಾಜೀನಾಮೆ ನೀಡಿದ್ದಾರೆ ಎನ್ನಲಾಗುತ್ತಿದೆ.
ಇಂದು ಶಾಸಕಾಂಗ ಸಭೆ ನಡೆಯಲಿದ್ದು ಮಾಜಿ ಸಿಎಂ, ಸಂಸದ ನೈಪಿರೊಯೊ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗುವ ಸಾಧ್ಯತೆಗಳಿವೆ.