ದೆಹಲಿಯ ಲೆಫ್ಟಿನೆಂಟ್ ಜನರಲ್ ಹುದ್ದೆಗೆ ರಾಜೀನಾಮೆ ನೀಡಿದ ನಜೀಬ್ ಜಿಂಗ್ ಅವರನ್ನು ಇಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೌಹಾರ್ದಯುತ ಭೇಟಿ ಮಾಡಿದ್ದಾರೆ ಎಂದು ಆಪ್ ಮೂಲಗಳು ತಿಳಿಸಿವೆ.
ಗುರುವಾರದಂದು ನಜೀಬ್ ಜಂಗ್, ಸಂಜೆ ಲೆಫ್ಟಿನೆಂಟ್ ಗೌವರ್ನರ್ ಹುದ್ದೆಗೆ ರಾಜೀನಾಮೆ ಘೋಷಿಸಿದ ಹಿನ್ನೆಲೆಯಲ್ಲಿ ಕೇಜ್ರಿವಾಲ್ ಇಂದು ರಾಜಭವನದಲ್ಲಿ ಜಂಗ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.
ನಜೀಬ್ ಜಿಂಗ್ ಕೆಲ ವ್ಯಯಕ್ತಿಕ ಕಾರಣಗಳಿಂದ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.
ಏತನ್ಮಧ್ಯೆ, ಕಾಂಗ್ರೆಸ್ ಕೇಂದ್ರ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು ಕೇಂದ್ರದ ಒತ್ತಡದಿಂದಾಗಿಯೇ ಜಂಗ್ ರಾಜೀನಾಮೆ ನೀಡಿದ್ದಾರೆ ಎಂದು ಆರೋಪಿಸಿದೆ.
ಆಮ್ ಆದ್ಮಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರೆನ್ ರಿಜಿಜು, ನಜೀಬ್ ಜಂಗ್ ಯಾಕೆ ರಾಜೀನಾಮೆ ನೀಡಿದ್ದಾರೆ ಎನ್ನುವುದು ತಿಳಿದಿಲ್ಲ. ಆಪ್ ಪಕ್ಷ ನಮ್ಮ ವಿರುದ್ಧ ಯಾಕೆ ಟೀಕೆ ಮಾಡುತ್ತಿದೆ ಎನ್ನುವುದು ಗೊತ್ತಿಲ್ಲ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.