ನವದೆಹಲಿ: ದೇಶದ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಧಾನಿ ನರೇಂದ್ರ ಮೋದಿಗೆ ಪ್ರಮಾಣ ವಚನ ಬೋಧಿಸಿದ್ದಾರೆ.
ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾವಿರಾರು ಗಣ್ಯರ ಮುಂದೆ ಮೋದಿ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದರು. ಮೋದಿ ಜೊತೆಗೆ 72 ಸಂಸದರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮಿಸಿದ ಕೂಡಲೇ ಮೊದಲು ರಾಷ್ಟ್ರಗೀತೆ ಮೊಳಗಿಸಲಾಯಿತು.
ಬಳಿಕ ರಾಷ್ಟ್ರಪತಿಗಳ ಅನುಮೋದನೆ ಪಡೆದು ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಆರಂಭಿಸಲಾಯಿತು. ಆರಂಭದಲ್ಲಿ ನರೇಂದ್ರ ಮೋದಿಯವರನ್ನು ಕರೆಯಲಾಯಿತು. ಮೋದಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಬಳಿಕ ರಾಜನಾಥ್ ಸಿಂಗ್ ಗೆ ಪ್ರಮಾಣ ವಚನ ಬೋಧಿಸಲಾಯಿತು.
ಬಳಿಕ ಕ್ರಮ ಪ್ರಕಾರವಾಗಿ ಅಮಿತ್ ಶಾ, ನಿತಿನ್ ಗಡ್ಕರಿ, ಜೆಪಿ ನಡ್ಡಾ, ಶಿವರಾಜ್ ಸಿಂಗ್ ಚೌಹಾಣ್, ನಿರ್ಮಲಾ ಸೀತಾರಾಮನ್, ಎಸ್. ಜೈಶಂಕರ್, ಮನೋಹರ್ ಲಾಲ್, ಎಚ್ ಡಿ ಕುಮಾರಸ್ವಾಮಿ ಸೇರಿದಂತೆ ಒಬ್ಬರಾದ ಮೇಲೊಬ್ಬರಂತೆ ಪ್ರಮಾಣ ವಚನ ಸ್ವೀಕಾರ ಮಾಢಿದ್ದಾರೆ.