ನವದೆಹಲಿ : ಕೋವ್ಯಾಕ್ಸಿನ್ ಲಸಿಕೆಯನ್ನು ಅಭಿವೃದ್ಧಿಪಡಿಸಿರುವ ಹೈದರಾಬಾದ್ನ ಭಾರತ್ ಬಯೋಟೆಕ್ ಇಂಟ್ರಾನಾಸನಲ್ ಕೋವಿಡ್ ಲಸಿಕೆಯನ್ನು ತುರ್ತು ಬಳಕೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ.
ಇದೀಗ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಇಂತಿಷ್ಟು ಹಣ ಪಾವತಿಸಿ ಈ ಲಸಿಕೆಯನ್ನು ಪಡೆದುಕೊಳ್ಳಬಹುದಾಗಿದೆ.
ವರದಿಗಳ ಪ್ರಕಾರ ಖಾಸಗಿ ಆಸ್ಪತ್ರೆಗಳಲ್ಲಿ ಈ ಲಸಿಕೆಯನ್ನು ಜಿಎಸ್ಟಿ ಹೊರತುಪಡಿಸಿ 800 ರೂ.ಗೆ ಪಡೆದುಕೊಳ್ಳಬಹುದು. ಸರ್ಕಾರಿ ಆಸ್ಪತ್ರೆಯಲ್ಲಿ ಇದರ ಪ್ರತಿ ಡೋಸ್ಗೆ 325 ರೂ. ಬೆಲೆಯಾಗಲಿದೆ ಎಂದು ಮೂಲಗಳು ತಿಳಿಸಿವೆ.
ಭಾರತ ಸರ್ಕಾರ ಮೂಗಿನ ಮೂಲಕ ಪಡೆಯಬಹುದಾದ ಲಸಿಕೆಗೆ ಅನುಮೋದನೆ ನೀಡಿದೆ.