ದೇಶದ ಪ್ರತಿಯೊಂದು ಸಿನೆಮಾ ಥಿಯೇಟರ್‌ಗಳಲ್ಲಿ ಸಿನೆಮಾ ಆರಂಭಕ್ಕೆ ಮುಂಚೆ ರಾಷ್ಟ್ರಗೀತೆ ಹಾಕುವುದು ಕಡ್ಡಾಯವಾಗಿದೆ ಎಂದು ಸುಪ್ರೀಂಕೋರ್ಟ್ ಆದೇಶ ನೀಡಿದೆ. ವಾರದೊಳಗಾಗಿ ಎಲ್ಲಾ ಸಿನೆಮಾ ಥಿಯೇಟರ್‌ಗಳಲ್ಲಿ ರಾಷ್ಟ್ರಗೀತೆ ಹಾಕಲಾಗುತ್ತಿದೆಯೇ ಎನ್ನುವ ಬಗ್ಗೆ ಪರಿಶೀಲನೆ ನಡೆಸಿ ಎಂದು ಕೇಂದ್ರ ಸರಕಾರಕ್ಕೆ ಆದೇಶ ನೀಡಿದೆ.
ಸಿನೆಮಾ ಥಿಯೇಟರ್‌ಗಳಲ್ಲಿ ರಾಷ್ಟ್ರಗೀತೆ ಹಾಕಿದಾಗ ಪ್ರತಿಯೊಬ್ಬರು ಎದ್ದು ನಿಂತು ಗೌರವ ಸಲ್ಲಿಸಬೇಕು. ರಾಷ್ಟ್ರಗೀತೆ ಹಾಡುವ ಸಂದರ್ಭದಲ್ಲಿ ಥಿಯೇಟರ್ ಸ್ಕ್ರೀನ್‌ನಲ್ಲಿ ರಾಷ್ಟ್ರಧ್ವಜ ತೋರಿಸಬೇಕು ಎಂದು ಆದೇಶದಲ್ಲಿ ತಿಳಿಸಿದೆ.
ವಾರದೊಳಗಾಗಿ ಸುಪ್ರೀಂಕೋರ್ಟ್ ಆದೇಶವನ್ನು ದೇಶದ ಪ್ರತಿಯೊಂದು ಸಿನೆಮಾ ಥಿಯೇಟರ್‌ಗಳಿಗೆ ತಲುಪಿಸಬೇಕು ಎಂದು ಸುಪ್ರೀಂಕೋರ್ಟ್ ಕೇಂದ್ರ ಸರಕಾರಕ್ಕೆ ನಿರ್ದೇಶನ ನೀಡಿದೆ.
ರಾಷ್ಟ್ರಗೀತೆ ಯಥಾವತ್ತಾಗಿರಬೇಕು. ಅದರ ಸಂಗೀತದಲ್ಲಿ ಅಥವಾ ಇನ್ನಾವುದೋ ರೂಪದಲ್ಲಿ ಬದಲಾವಣೆಯಾಗಿರಬಾರದು. ಇದನ್ನು ವಾಣಿಜ್ಯೀಕವಾಗಿ ಬಳಕೆ ಮಾಡಬಾರದು ಎಂದು ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.