ಪ್ರಧಾನಮಂತ್ರಿ ನರೇಂದ್ರ ಮೋದಿಯ ನೋಟು ನಿಷೇಧ ಜಾರಿಗೊಳಿಸಿ 50 ದಿನಗಳ ಗಡುವು ನಾಳೆ ಮುಕ್ತಾಯವಾಗುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಕೃತ ಬ್ಯಾಂಕ್‌ಗಳು ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದೆ.
ನೋಟು ನಿಷೇಧದಿಂದಾಗಿ ಬ್ಯಾಂಕ್ ಸಿಬ್ಬಂದಿಗಳ ಮತ್ತು ಸಾರ್ವಜನಿಕರ ಸಮಸ್ಯೆಗಳನ್ನು ಇತ್ಯರ್ಥಗೊಳಿಸುವಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ವಿಫಲವಾಗಿದೆ ಎಂದು ಬ್ಯಾಂಕ್ ಅಧಿಕಾರಿಗಳು ಆರೋಪಿಸಿದ್ದಾರೆ.
ದೇಶದ ಎಲ್ಲಾ ಬ್ಯಾಂಕ್‌ಗಳಲ್ಲಿ ಮತ್ತು ಬ್ಯಾಂಕ್ ಶಾಖೆಗಳಲ್ಲಿ ಆರ್‌ಬಿಐ, ಖಾಸಗಿ ಮತ್ತು ರಾಷ್ಟ್ರೀಕೃತ ಬ್ಯಾಂಕ್ ಎನ್ನುವ ತಾರತಮ್ಯ ಮಾಡದೆ ಅಗತ್ಯವಾದ ಹಣ ಸರಬರಾಜು ಮತ್ತು ಎಲ್ಲಾ ಎಟಿಎಂಗಳಲ್ಲಿ ಹಣದ ಸೌಲಭ್ಯ ಒದಗಿಸಬೇಕು. ಇಲ್ಲವಾದಲ್ಲಿ ದೇಶಾದ್ಯಂತ ಪ್ರತಿಭಟನೆ ನಡೆಸುವುದಾಗಿ ಬ್ಯಾಂಕ್ ಸಿಬ್ಬಂದಿಗಳು ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.