ನವದೆಹಲಿ: ಮಾಜಿ ಕ್ರಿಕೆಟಿಗ ಹಾಗೂ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿದು ಪಂಜಾಬ್ ರಾಜ್ಯಕ್ಕೆ ಉಪನಾಯಕರಾಗಲಿದ್ದಾರೆ. ಅಂದರೆ ಹೊಸದಾಗಿ ಆಯ್ಕೆಯಾದ ಪಂಜಾಬ್ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಲಿದ್ದಾರೆ.
ಹೀಗೊಂದು ಬಲವಾದ ಸುದ್ದಿ ಕಾಂಗ್ರೆಸ್ ಮೂಲಗಳಿಂದ ಕೇಳಿಬರುತ್ತಿದೆ. ಕ್ಯಾಪ್ಟನ್ ಅಮರೀಂದರ್ ಸಿಂಗ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಪಂಜಾಬ್ ನಲ್ಲಿ ಅಸ್ಥಿತ್ವಕ್ಕೆ ಬರಲಿದ್ದು, ಸಿದುಗೆ ಉಪ ಮುಖ್ಯಮಂತ್ರಿ ಸ್ಥಾನ ಸಿಗುವುದು ಬಹುತೇಕ ಖಚಿತವಾಗಿದೆ.
ವಿಧಾನ ಸಭೆ ಚುನಾವಣೆಗೆ ಮೊದಲು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಸಿದು, ಪಂಜಾಬ್ ನಲ್ಲಿ ಈಗ ಪ್ರಭಾವಿ ನಾಯಕ. ಇಂದು ಬೆಳಿಗ್ಗ ಅಮರೀಂದರ್ ಸಿಂಗ್ ಪ್ರಮಾಣ ವಚನ ಸ್ವೀಕರಿಸಲಿದ್ದು, ಇವರೊಂದಿಗೆ ಇತರ 9 ಮಂದಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಉಪ ಮುಖ್ಯಮಂತ್ರಿ ಹುದ್ದೆ ಮೇಲೆ ಕಣ್ಣಿಟ್ಟಿರುವ ಸಿದುಗೆ ಈ ಸಂದರ್ಭದಲ್ಲಿ ಬಯಸಿದ್ದು ಸಿಗಲಿದೆ ಎಂದೇ ನಂಬಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ