ಮುಂಬೈ: ಮಹಾರಾಷ್ಟ್ರದಲ್ಲಿ ಅತಂತ್ರ ಸ್ಥಿತಿಗೆ ಇಂದು ಒಂದು ಹಂತದ ಬ್ರೇಕ್ ಬೀಳುವ ನಿರೀಕ್ಷೆಯಿದೆ. ದೆಹಲಿಯಲ್ಲಿ ಇಂದು ಎನ್ ಸಿಪಿ ಮತ್ತು ಕಾಂಗ್ರೆಸ್ ನಾಯಕರು ಸಭೆ ಸೇರಲಿದ್ದು, ಶಿವಸೇನೆಗೆ ಬೆಂಬಲ ನೀಡುವ ಕುರಿತು ನಿರ್ಧಾರ ತೆಗೆದುಕೊಳ್ಳುವ ಸಾಧ‍್ಯತೆಯಿದೆ.
ಎನ್ ಸಿಪಿ, ಶಿವಸೇನೆ ನೇತೃತ್ವದಲ್ಲಿ ಸರ್ಕಾರ ರಚಿಸಲು ಕಾಂಗ್ರೆಸ್ ಬೆಂಬಲ ಬೇಕು. ಇದಕ್ಕಾಗಿ ಎನ್ ಸಿಪಿ ನಾಯಕರು ಕಾಂಗ್ರೆಸ್ ನಾಯಕರೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ.
ಅಧಿಕಾರ ಹಂಚಿಕೆ ಕುರಿತಂತೆ ಮಾತುಕತೆ ಅಂತಿಮವಾದರೆ ಇಂದೇ ಮಹಾರಾಷ್ಟ್ರದಲ್ಲಿ ಹೊಸ ಸರ್ಕಾರ ರಚನೆಯಾಗುವ ಬಗ್ಗೆ ತೀರ್ಮಾನ ಹೊರಬೀಳಲಿದೆ.