ಮುಂಬೈ: ಮಹಾರಾಷ್ಟ್ರದಲ್ಲಿ ಕಾಂಗ್ರೆಸ್-ಎನ್ ಸಿಪಿ ಜತೆಗೂಡಿ ಶಿವಸೇನೆ ಸರ್ಕಾರ ರಚಿಸುವ ಪ್ರಯತ್ನಕ್ಕೆ ಹಿನ್ನಡೆಯಾಗಿದೆ. ಎನ್ ಸಿಪಿ ಶಿವಸೇನೆಗೆ ಶಾಕ್ ಕೊಟ್ಟಿದೆ.
ಇದುವರೆಗೆ ಶಿವಸೇನೆ ಜತೆಗೆ ಕಾಂಗ್ರೆಸ್ ಮತ್ತು ಎನ್ ಸಿಪಿ ಮೈತ್ರಿ ಮಾಡಿಕೊಳ್ಳುವ ಮಾತುಕತೆ ನಡೆಯುತ್ತಿದೆ. ಆದರೆ ಇದೀಗ ಯೂ ಟರ್ನ್ ಹೊಡೆದ ಎನ್ ಸಿಪಿ ನಾಯಕರು ಕಾಂಗ್ರೆಸ್ ಜತೆ ಮೈತ್ರಿ ಮಾತುಕತೆ ನಡೆಸಿಯೇ ಇಲ್ಲ ಎನ್ನುತ್ತಿದ್ದಾರೆ.
ಹೀಗಾಗಿ ಸರ್ಕಾರ ರಚಿಸುವ ಶಿವಸೇನೆ ಆಸೆಗೆ ಹಿನ್ನಡೆಯಾಗಿದೆ. ಸ್ವತಃ ಶರದ್ ಪವಾರ್ ಈ ವಿಚಾರದಲ್ಲಿ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಮತ್ತಷ್ಟು ಸಮಾಲೋಚನೆ ನಡೆಸಬೇಕಿದೆ ಶರದ್ ಪವಾರ್ ಹೇಳಿದ್ದಾರೆ. ಹೀಗಾಗಿ ಮಹಾರಾಷ್ಟ್ರದಲ್ಲಿ ಅತಂತ್ರ ಸ್ಥಿತಿ ಮುಂದುವರಿಯಲಿದೆ.