Publish Date: Sun, 06 Sep 2020 (08:12 IST)
Updated Date: Sun, 06 Sep 2020 (08:17 IST)
ಆಗ್ರಾ : ಚಾಕಲೇಟ್ ನೀಡುವುದಾಗಿ ಆಮಿಷಯೊಡ್ಡಿ 6 ವರ್ಷದ ಬಾಲಕಿಯ ಮೇಲೆ ನೆರೆಮನೆಯ ವ್ಯಕ್ತಿ ಮಾನಭಂಗ ಎಸಗಿದ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ.
ಬಾಲಕಿ ಮನೆಯ ಹೊರಗೆ ಆಟವಾಡುತ್ತಿದ್ದಾಗ ಅಲ್ಲಿಗೆ ಬಂದ ನೆರೆಮನೆಯಾತ ಚಾಕಲೇಟ್ ನೀಡುವುದಾಗಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡಕ್ಕೆ ಕರೆದುಕೊಂಡು ಹೋಗಿ ಮಾನಭಂಗ ಎಸಗಿದ್ದಾನೆ. ಬಳಿಕ ಬಾಲಕಿ ಕಿರುಚಲು ಪ್ರಾರಂಭಿಸಿದಾಗ ಸ್ಥಳೀಯರು ಅಲ್ಲಿಗೆ ಬಂದ ಹಿನ್ನಲೆಯಲ್ಲಿ ಆರೋಪಿ ಪರಾರಿಯಾಗಿದ್ದಾನೆ. ಬಳಿಕ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿ ಸಂತ್ರಸ್ತೆಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.
ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯನ್ನು 21 ವರ್ಷದ ರಾಹುಲ್ ಕುಮಾರ್ ಎಂಬುದಾಗಿ ಗುರುತಿಸಲಾಗಿದೆ.