Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಮನೆಯಲ್ಲೇ ಕುಳಿತು ಹಲ್ಲಿನ ಸಮಸ್ಯೆಯನ್ನು ಪರಿಹರಿಸಿಕೊಳ್ಳಲು ಕೇಂದ್ರ ಸರ್ಕಾರದಿಂದ ಹೊಸ ಆ್ಯಪ್ ಬಿಡುಗಡೆ

ಮನೆಯಲ್ಲೇ ಕುಳಿತು ಹಲ್ಲಿನ ಸಮಸ್ಯೆಯನ್ನು ಪರಿಹರಿಸಿಕೊಳ್ಳಲು ಕೇಂದ್ರ ಸರ್ಕಾರದಿಂದ  ಹೊಸ ಆ್ಯಪ್ ಬಿಡುಗಡೆ
ನವದೆಹಲಿ , ಮಂಗಳವಾರ, 8 ಅಕ್ಟೋಬರ್ 2019 (07:52 IST)
ನವದೆಹಲಿ : ಜನರಿಗೆ ಮನೆಯಲ್ಲೇ ಕುಳಿತು ತಮ್ಮ ಹಲ್ಲಿನ ಸಮಸ್ಯೆಗಳಿಗೆ ಪರಿಹಾರ ಮತ್ತು ಸಲಹೆ ಪಡೆಯಲು ಅನುಕೂಲವಾಗುವಂತೆ ವೆಬ್ ಸೈಟ್ ಹಾಗೂ ಮೊಬೈಲ್ ಆಪ್ ವೊಂದನ್ನು  ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ.




ಇ-ದಂತಸೇವಾ ಎಂಬ ವೆಬ್ ಸೈಟ್, ಮೊಬೈಲ್ ಆಪ್ ನ್ನು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ.ಹರ್ಷವರ್ಧನ್ ಬಿಡುಗಡೆ ಮಾಡಿದ್ದಾರೆ. ಇದರಿಂದ ಜನರು ಮನೆಯಲ್ಲಿಯೇ ಕುಳಿತು ತಮ್ಮ ಹಲ್ಲಿನ ಸಮಸ್ಯೆಗೆ ಸಲಹೆ, ಕೆಲವೊಂದಕ್ಕೆ ಪರಿಹಾರವನ್ನು ಪಡೆಯಬಹುದಾಗಿದೆ.


ಈ ಕುರಿತು ಮಾತನಾಡಿದ ಸಚಿವ ಡಾ.ಹರ್ಷವರ್ಧನ್, ಇದು ಪ್ರಧಾನಿ ನರೇಂದ್ರ ಮೋದಿಯವರ ಡಿಜಿಟಲ್ ಇಂಡಿಯಾ ಪರಿಕಲ್ಪನೆಯ ಅಡಿಯಲ್ಲಿ ಬಿಡುಗಡೆಯಾದ ವೆಬ್ ಸೈಟ್ ಆಗಿದೆ. ಈ ವೆಬ್ ಸೈಟ್, ಮೊಬೈಲ್ ಆಪ್ ಮೂಲಕ ದಂತ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಮಾಹಿತಿಯನ್ನು ಪಡೆಯಬಹುದಾಗಿದೆ ಎಂದು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ದುರ್ಗಾ ಪೂಜೆ ಮಾಡಿ ಇಸ್ಲಾಮೀ ಸಂಪ್ರದಾಯವಾದಿಗಳ ಕೆಂಗಣ್ಣಿಗೆ ಗುರಿಯಾದ ಸಂಸದೆ ನುಸ್ರತ್ ಜಹಾನ್