Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ದೇಶದ 22 ಸ್ಥಳಗಳಲ್ಲಿ ಎನ್‌ಐಎ ದಿಢೀರ್‌ ದಾಳಿ: ಉಗ್ರ ಸಂಘಟನೆಗಳ ಚಟುವಟಿಕೆ ಹಿನ್ನೆಲೆಯಲ್ಲಿ ಶೋಧ

National Investigation Agency

Sampriya

ನವದೆಹಲಿ , ಶನಿವಾರ, 5 ಅಕ್ಟೋಬರ್ 2024 (14:16 IST)
Photo Courtesy X
ನವದೆಹಲಿ: ದೇಶದ ವಿವಿಧ ಪ್ರದೇಶಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಯು (ಎನ್‌ಐಎ) ಶನಿವಾರ ಶೋಧ ಕಾರ್ಯಾಚರಣೆ ನಡೆಸಿದೆ.  ಜೈಷ್‌ ಎ ಮೊಹಮ್ಮದ್‌ (ಜೆಇಎಂ) ಉಗ್ರ ಸಂಘಟನೆಯ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ.

ಮಹಾರಾಷ್ಟ್ರ, ದೆಹಲಿ, ಅಸ್ಸಾಂ, ಉತ್ತರಪ್ರದೇಶ ಹಾಗೂ ಜಮ್ಮು ಮತ್ತು ಕಾಶ್ಮೀರ ರಾಜ್ಯಗಳಲ್ಲಿನ 22 ಪ್ರದೇಶಗಳಲ್ಲಿ ದಾಳಿ ಮಾಡಲಾಗಿದೆ. ಬೆಳಗ್ಗೆ 6 ಗಂಟೆಗೆ ಏಕಕಾಲದಲ್ಲಿ 22 ಸ್ಥಳಗಳಲ್ಲಿ ಶೋಧ ಕಾರ್ಯ ಮಾಡಲಾಗುತ್ತಿದೆ. ಈ ಕಾರ್ಯಾಚರಣೆ ಎರಡು ಮೂರು ದಿನ ಮುಂದುವರಿಯಬಹುದು ಎಂದು ಮೂಲಗಳು ತಿಳಿಸಿವೆ.

ಹೈಬ್ರಿಡ್‌ ಭಯೋತ್ಪಾದಕರು, ಉಗ್ರರ ಬಗ್ಗೆ ಸಹಾನುಭೂತಿ ಹೊಂದಿರುವವರು, ಅವರಿಗೆ ಆಶ್ರಯ ನೀಡಿ ಸಹಾಯ ಮಾಡುವವರು ಮತ್ತು ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಅಂಗಸಂಸ್ಥೆಗಳ ಜತೆ ಸಂಬಂಧ ಹೊಂದಿರುವವರಿಗೆ ಸೇರಿದ ಸ್ಥಳಗಳಲ್ಲಿ ಶೋಧ ಮಾಡಲಾಗುತ್ತಿದೆ.

ಪಾಕಿಸ್ತಾನ ಬೆಂಬಲಿತ ಉಗ್ರ ಸಂಘಟಗಳಾದ ಲಷ್ಕರ್ ಎ ತಯಬಾ (ಎಲ್‌ಇಟಿ), ಜೈಷ್‌–ಎ– ಮೊಹಮ್ಮದ್‌ (ಜೆಇಎಂ), ಹಿಜ್ಬುಲ್‌ ಮುಜಾಹಿದ್ದೀನ್‌ (ಎಚ್‌ಎಂ), ಅಲ್‌ ಬದ್ರ್‌, ಅಲ್‌ ಕೈದಾ ಉಗ್ರ ಸಂಘಟನೆಗಳ ಮೇಲೆ ನಿಗಾ ವಹಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಿನಲ್ಲಿ ಮಹಾಲಕ್ಷ್ಮಿ ಮರ್ಡರ್ ರಹಸ್ಯ ಬಯಲು: ದೇಹ ಪೀಸ್ ಮಾಡಿದ್ದು ಯಾಕೆ ವಿವರ ಇಲ್ಲಿದೆ