ನವದೆಹಲಿ: ಫೆಬ್ರವರಿ 1 ರಂದು ಗಲ್ಲು ಶಿಕ್ಷೆ ನಿಗದಿಯಾಗಿರುವ ನಿರ್ಭಯಾ ಗ್ಯಾಂಗ್ ರೇಪ್ ಪ್ರಕರಣದ ನಾಲ್ವರು ಆರೋಪಿಗಳಲ್ಲಿ ಒಬ್ಬನಾದ ಮುಖೇಶ್ ಕುಮಾರ್ ಸಿಂಗ್ ಕ್ಷಮಾದಾನ ಅರ್ಜಿಯ ವಿಚಾರಣೆಯನ್ನು ಇಂದು ಸುಪ್ರೀಂಕೋರ್ಟ್ ನಡೆಸಲಿದೆ.
ರಾಷ್ಟ್ರಪತಿ ರಮಾನಾಥ್ ಕೋವಿಂದ್ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿರುವುದನ್ನು ಪ್ರಶ್ನಿಸಿ ಮುಖೇಶ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ. ಇದರ ವಿಚಾರಣೆಯನ್ನು ತ್ವರಿತವಾಗಿ ಇಂದು ನಡೆಸಲು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶ ಎಸ್.ಎ. ಬೋಬ್ಡೆ ನಿರ್ಧರಿಸಿದ್ದಾರೆ.
ಈಗಾಗಲೇ ಇನ್ನೊಬ್ಬ ಅಪರಾಧಿ ಅಕ್ಷಯ್ ಠಾಕೂರ್ ನ ಕ್ಯುರೇಟಿವ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಆದರೆ ಇನ್ನಿಬ್ಬರು ಅಪರಾಧಿಗಳಾದ ವಿನಯ್ ಕುಮಾರ್ ಮತ್ತು ಪವನ್ ಕ್ಯುರೇಟಿವ್ ಅರ್ಜಿ ಸಲ್ಲಿಸಿಲ್ಲ. ಒಂದು ವೇಳೆ ಈ ಇಬ್ಬರು ಕ್ಯುರೇಟಿವ್ ಅರ್ಜಿ ಸಲ್ಲಿಸಲಿದ್ದರೆ ಗಲ್ಲು ಶಿಕ್ಷೆ ದಿನಾಂಕ ಮುಂದೂಡಿಕೆಯಾಗುವ ಸಾಧ್ಯತೆಯಿದೆ.