ಅಹಮ್ಮದಾಬಾದ್: ಗುಜರಾತ್ ನಲ್ಲಿ ನೂತನ ಸರ್ಕಾರ ರಚಿಸಲು ಹೊರಟಿದ್ದ ಬಿಜೆಪಿಗೆ ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ ಅಸಮಾಧಾನ ತಲೆನೋವಾಗಿ ಪರಿಣಮಿಸಿತ್ತು. ಇದೀಗ ಅದು ಉಪಶಮನವಾಗಿದೆ.
ಪ್ರಮುಖ ಖಾತೆಗಳನ್ನು ನೀಡದೇ ಉಪಮುಖ್ಯಮಂತ್ರಿ ಸ್ಥಾನ ನೀಡಿದ್ದಕ್ಕೆ ನಿತಿನ್ ಪಟೇಲ್ ಅಸಮಾಧಾನಗೊಂಡಿದ್ದರು. ಈ ಹಿನ್ನಲೆಯಲ್ಲಿ ಪ್ರಬಲ ಪಟೇಲ್ ಸಮುದಾಯದ ಮುಖಂಡ ನಿತಿನ್ ಪಟೇಲ್ ಬಿಜೆಪಿ ನಾಯಕತ್ವದ ವಿರುದ್ಧ ತಿರುಗಿಬಿದ್ದಿದ್ದರು.
ಇದೀಗ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಜತೆಗೆ ಮಾತುಕತೆ ನಡೆಸಿ ಭರವಸೆ ಸಿಕ್ಕ ಬಳಿಕ ಅಧಿಕಾರ ಸ್ವೀಕರಿಸುತ್ತಿರುವುದಾಗಿ ನಿತಿನ್ ಪಟೇಲ್ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಬಿಜೆಪಿ ಭಿನ್ನಮತಕ್ಕೆ ತಾತ್ಕಾಲಿಕ ಬ್ರೇಕ್ ಸಿಕ್ಕಂತಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ