ಕೋ-ಆಪರೇಟಿವ್ ಬ್ಯಾಂಕುಗಳಿಗೆ ಐಟಿ ವಿನಾಯಿತಿ ನೀಡಲು ಸಾಧ್ಯವಿಲ್ಲ ಎಂದು ಕೇಂದ್ರದ ಹಣಕಾಸು ಸಚಿವ ಅರುಣ್ ಜೇಟ್ಲಿ ಸ್ಪಷ್ಟಪಡಿಸಿದ್ದಾರೆ.
ವಾಣಿಜ್ಯ ಬ್ಯಾಂಕುಗಳಂತೆ ಕೋ–ಆಪರೇಟಿವ್ ಬ್ಯಾಂಕುಗಳು ಕಾರ್ಯನಿರ್ವಹಿಸುತ್ತವೆ. ಹೀಗಾಗಿ ವಾಣಿಜ್ಯ ಬ್ಯಾಂಕುಗಳ ರೀತಿ ಅವುಗಳನ್ನು ಪರಿಗಣಿಸಲಾಗುತ್ತದೆ. ಐಟಿ ವಿನಾಯಿತಿ ನೀಡಲು ಸಾಧ್ಯವಿಲ್ಲ ಎಂದು ಲೋಕಸಭೆಯಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯರ ಪ್ರಶ್ನೆಗೆ ಈ ರೀತಿ ಉತ್ತರಿಸಿದ್ದಾರೆ.
ಲಾಭದಲ್ಲಿರುವ ಕೋ-ಆಪರೇಟಿವ್ ಬ್ಯಾಂಕುಗಳಿಗೆ ಆದಾಯ ತೆರಿಗೆ ವಿನಾಯಿತಿ ನೀಡಲಾಗುತ್ತದೆ ಎಂಬ ವರದಿಯನ್ನು ಕೇಂದ್ರ ಸರ್ಕಾರ ತಳ್ಳಿ ಹಾಕಿದೆ. ಕೋ-ಆಪರೇಟಿವ್ ಬ್ಯಾಂಕುಗಳು ಸದಸ್ಯರಲ್ಲದವರಿಗೂ ವ್ಯಾಪ್ತಿಯನ್ನು ವಿಸ್ತರಿಸುವುದರಿಂದ ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 80ಪಿ ಅಡಿ ವಿನಾಯಿತಿ ನೀಡುವುದು ಅನ್ವಯವಾಗುವುದಿಲ್ಲ ಎಂದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.