1992 ರ ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ವಿಚಾರಣೆ ನಡೆಯುತ್ತಿರುವಂತೆಯೇ ಅಯೋಧ್ಯೆಯಲ್ಲಿ ರಾಮ ಮಂದಿರದ ನಿರ್ಮಾಣವನ್ನು ತಡೆಯಲು ಭೂಮಿಯ ಮೇಲೆ ಅಂತಹ ಯಾವುದೇ ಶಕ್ತಿಯಿಲ್ಲ ಎಂದು ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಗುಡುಗಿದ್ದಾರೆ.
ರಾಮ ದೇವಾಲಯ ಮತ್ತು ಬಾಬ್ರಿ ಮಸೀದಿ ಚರ್ಚೆಯ ವಿಷಯ ಕೈಬಿಡಬೇಕು. ಅಂದು ದೇವಸ್ಥಾನದ ನಿರ್ಮಾಣವನ್ನು ವಿರೋಧಿಸಿದವರು ಈಗ ರಾಮ್ ಭಕ್ತರಾಗಿದ್ದಾರೆ ಎಂದು ತಿಳಿಸಿದ್ದಾರೆ.
ಮುಸ್ಲಿಂ ಸಮುದಾಯ ಕೂಡಾ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುವುದರ ಪರವಾಗಿದ್ದಾರೆ. ಭವ್ಯ ರಾಮಮಂದಿರ ನಿರ್ಮಾಣ ತಡೆಯಲು ಯಾವ ಶಕ್ತಿಗೂ ಸಾಧ್ಯವಿಲ್ಲ ಎಂದರು.
ಏತನ್ಮಧ್ಯೆ, ಹಿಂದುತ್ವ ನಾಯಕ ರಾಮ್ ವಿಲಾಸ್ ವೇದಾಂತಿ ಅವರು ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿ ಧ್ವಂಸಗೊಳಿಸಿದವರಲ್ಲಿ ತಾವು ಕೂಡಾ ಒಬ್ಬರು ಎಂದು ಬಹಿರಂಗವಾಗಿ ಘೋಷಿಸಿದರು.
ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡರಾದ ಎಲ್.ಕೆ.ಆಡ್ವಾಣಿ, ಮುರಳಿ ಮನೋಹರ್ ಜೋಷಿ ಮತ್ತು ಉಮಾ ಭಾರತಿ ಇಂದು ಸಿಬಿಐ ವಿಶೇಷ ನ್ಯಾಯಾಲಯದ ಮುಂದೆ ಹಾಜರಾಗಿ ಜಾಮೀನು ಪಡೆದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.