ಮನೆಕೆಲಸದಾಕೆಯ ಮೇಲೆ ಅತ್ಯಾಚಾರವೆಸಗಿ, ಅತ್ಯಾಚಾರವೆಸಗುತ್ತಿರುವ ದೃಶ್ಯಗಳ ಅಶ್ಲೀಲ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಚಿತ್ರನಿರ್ಮಾಪಕನನ್ನು ಪೊಲೀಸರು ಬಂಧಿಸಿದ್ದಾರೆ.
ನೋಯ್ಡಾದ ಸೆಕ್ಟರ್ 15-ಇ-ಬ್ಲಾಕ್‌ನಲ್ಲಿ ಚಿತ್ರನಿರ್ಮಾಪಕ ನಿನ್ನೆ ರಾತ್ರಿ ಮನೆಕೆಲಸದಾಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಅತ್ಯಾಚಾರವೆಸಗಿದ ನಂತರ ಅಶ್ಲೀಲ ವಿಡಿಯೋ ಮಾಡಿ ಯಾರಿಗಾದರೂ ಘಟನೆಯ ಬಗ್ಗೆ ಬಹಿರಂಗಪಡಿಸಿದಲ್ಲಿ ಇಂಟರ್‌ನೆಟ್‌ನಲ್ಲಿ ಹಾಕುವುದಾಗಿ ಬೆದರಿಕೆಯೊಡ್ಡಿದ್ದಾನೆ ಎಂದು ಅತ್ಯಾಚಾರಕ್ಕೊಳಗಾದ ಮಹಿಳೆಯ ಪತಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಆರೋಪಿ ಚಿತ್ರನಿರ್ಮಾಪಕ, ಸಿನೆಮಾ, ಜಾಹೀರಾತುಗಳಲ್ಲಿ ಕೆಲಸ ಮಾಡಿದ್ದಲ್ಲದೇ ಪ್ರಮುಖ ಚಾನಲ್‌ಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿ ಅನಿಲ್ ಕುಮಾರ್ ಶಾಹಿ ತಿಳಿಸಿದ್ದಾರೆ.
ಅತ್ಯಾಚಾರಕ್ಕೊಳಗಾದ ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.