Publish Date: Sat, 10 Oct 2020 (20:44 IST)
Updated Date: Sat, 10 Oct 2020 (20:50 IST)
ರಾಜ್ಯದಲ್ಲಿ ಇದೀಗ ಎರಡು ಕ್ಷೇತ್ರಗಳಲ್ಲಿ ಬೈಎಲೆಕ್ಷನ್ ನಡೆಯುತ್ತಿದೆ.
ಈ ನಡುವೆ ಹಾಸನದ ಅರಸೀಕೆರೆ ಕ್ಷೇತ್ರದಿಂದ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸಿಎಂ ಅವರ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ಸ್ಪರ್ಧಿಸುವ ಕುರಿತು ಚರ್ಚೆಗಳು ಶುರುವಾಗಿವೆ.
ಇದಕ್ಕೆ ಪುಷ್ಠಿ ನೀಡುವಂತೆ ಸಂತೋಶ್ ಅರಸೀಕೆರೆಗೆ ಹೆಚ್ಚಾಗಿ ಭೇಟಿ ನೀಡುತ್ತಿದ್ದು, ಪಕ್ಷ ಸಂಘಟನೆಗೆ ಒತ್ತು ನೀಡಿದ್ದಾರೆ.
ನಾನು ಆಕಾಂಕ್ಷಿಯಲ್ಲ. ಆದರೆ ಪಕ್ಷ ಬಯಸಿದರೆ ಚುನಾವಣೆಗೆ ಸ್ಪರ್ಧೆ ಮಾಡುವೆ ಎಂದು ಬಿ.ಎಸ್.ಯಡಿಯೂರಪ್ಪನವರ ರಾಜಕೀಯ ಕಾರ್ಯದರ್ಶಿಯಾಗಿರುವ ಎನ್.ಆರ್.ಸಂತೋಷ್ ಹೇಳಿದ್ದಾರೆ.