ಬರೇಲಿಯಲ್ಲಿ ನರ್ಸ್ ಗ್ಯಾಂಗ್‌ರೇಪ್ ಘಟನೆ ಬೆಳಕಿಗೆ ಬಂದಿದೆ. ಆಸ್ಪತ್ರೆಯಲ್ಲಿ ನರ್ಸ್ ಉದ್ಯೋಗದಲ್ಲಿದ್ದ ಮಹಿಳೆ ನೈಟ್‌ಶಿಫ್ಟ್‌ಗಾಗಿ ತೆರಳುತ್ತಿರುವ ಸಂದರ್ಭದಲ್ಲಿ ಆರೋಪಿಗಳು ಗ್ಯಾಂಗ್‌ರೇಪ್ ಎಸಗಿ ಪರಾರಿಯಾಗಿದ್ದಾರೆ.
ಪೊಲೀಸ್ ಮೂಲಗಳ ಪ್ರಕಾರ, ಮಹಿಳೆ ವೈದ್ಯಕೀಯ ಕಾಲೇಜಿನಲ್ಲಿ ನರ್ಸ್ ವೃತ್ತಿಯಲ್ಲಿದ್ದು, ಅಂದು ನೈಟ್ ಡ್ಯೂಟಿಯಿದ್ದ ಕಾರಣವಾಗಿ ರಾತ್ರಿ ಮನೆಯಿಂದ ಆಸ್ಪತ್ರೆಗೆ ತೆರಳುತ್ತಿದ್ದಳು. ದಾರಿಯಲ್ಲಿ ಮಹಿಳೆ ತನ್ನ ಪತಿಯೊಂದಿಗೆ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದಳು. ಬರಾದರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ನಿರ್ಜನ ಪ್ರದೇಶ ತಲುಪುತ್ತಿದ್ದಂತೆ ಮೂವರು ಆರೋಪಿಗಳು ಹಿಂದಿನಿಂದ ಬಂದು ಆಕೆಯನ್ನು ಹಿಡಿದು ರಸ್ತೆ ಬದಿಗೆ ಎಳೆದುಕೊಂಡು ಹೋಗಿ ಗ್ಯಾಂಗ್‌ರೇಪ್ ಎಸಗಿದ್ದಾರೆ.
ಪತಿಗೆ ಮೊಬೈಲ್‌ನಲ್ಲಿ ಪತ್ನಿಯ ಚೀರಾಟ, ಕೂಗಾಟ ಕೇಳಿ ಬಂದಿದೆ. ಕೂಡಲೇ ಪೊಲೀಸರಿಗೆ ಕರೆ ಮಾಡಿದ್ದಾನೆ. ಪೊಲೀಸರು ಘಟನಾ ಸ್ಥಳಕ್ಕೆ ಬರುವ ಮುನ್ನವೇ ಆರೋಪಿಗಳು ಪರಾರಿಯಾಗಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯೋಗೇಂದ್ರ ಕುಮಾರ್ ಮಾತನಾಡಿ, ಮಹಿಳೆ ನಿರ್ಜನ ಪ್ರದೇಶದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಳು. ನಂತರ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಮಹಿಳೆಯ ಹೇಳಿಕೆಯನ್ನು ಪಡೆದು ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.