ನವದೆಹಲಿ : ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ ಅಧಿಕಾರದ ಚುಕ್ಕಾಣಿ ಹಿಡಿದ ಪ್ರಧಾನಿ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಜುಲೈ 5ರಂದು ಮೊದಲ ಬಜೆಟ್ ಮಂಡಿಸಲಿದೆ.
ಮೋದಿ ಸರ್ಕಾರದ ಹಣಕಾಸು ಸಚಿವೆಯಾಗಿ ಆಯ್ಕೆಯಾದ ನಿರ್ಮಲಾ ಸೀತಾರಾಮನ್ ಅವರು ಅಂದು ಪರಿಪೂರ್ಣ ಬಜೆಟ್ ಅನ್ನು ಮಂಡಿಸಲಿದ್ದಾರೆ. ಈ ಬಾರಿಯ ಬಜೆಟ್‌ನಲ್ಲಿ ದೇಶದ ಜನತೆ, ಮಧ್ಯಮ ವರ್ಗದ ಜನತೆ ಮತ್ತು ಕೃಷಿಕರು ಸೇರಿದಂತೆ ಎಲ್ಲ ವರ್ಗಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ ಎನ್ನಲಾಗಿದೆ.
ಇದಕ್ಕೆ ಮೊದಲು ಹದಿನೇಳನೇ ಲೋಕಸಭೆಯ ಮೊದಲ ಅಧಿವೇಶನ ಜೂನ್ 17ರಿಂದ ಜುಲೈ 26ರ ವರೆಗೆ ನಡೆಯಲಿದೆ. ಜೂನ್ 19ರಂದು ಸ್ಪೀಕರ್ ಆಯ್ಕೆ ನಡೆಯಲಿದೆ. ಜೂನ್ 20ರಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.