ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅಮೆರಿಕ ಪ್ರವಾಸಕ್ಕೆ ತೆರಳಲಿದ್ದು ದ್ವಿಪಕ್ಷೀಯ ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮಾರನೇ ದಿನ ಜೂನ್ 26 ರಂದು ಪ್ರಧಾನಿ ಮೋದಿ, ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯದ ಮೂಲಗಳು ತಿಳಿಸಿವೆ.
ಅಮೆರಿಕದ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಆಯ್ಕೆಯಾದ ನಂತರ ಮೊದಲ ಬಾರಿಗೆ ಅಮೆರಿಕ ಪ್ರವಾಸಕ್ಕೆ ತೆರಳುತ್ತಿದ್ದು, ಮಹತ್ವದ ಮಾತುಕತೆಗಳು ನಡೆಯುವ ಸಾಧ್ಯತೆಗಳಿವೆ ಎಂದು ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಯೋತ್ಪಾದನೆಯನ್ನು ನಿರ್ಮೂಲನೆಗೊಳಿಸಿ ಎಂದು ಈಗಾಗಲೇ ಪಾಕಿಸ್ತಾನಕ್ಕೆ ಕಟ್ಟು ನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ಉಭಯ ನಾಯಕರ ಮಧ್ಯೆ ಪಾಕಿಸ್ತಾನ ವಿಷಯ ಮಹತ್ವದ ಚರ್ಚೆಯಾಗಲಿದೆ ಎಂದು ವಿದೇಶಾಂಗ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
http://kannada.fantasycricket.webdunia.com/
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊ
ಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.