Publish Date: Sat, 19 Mar 2022 (12:44 IST)
Updated Date: Sat, 19 Mar 2022 (12:47 IST)
ಚಂಡಿಗಢ : ಪಂಜಾಬ್ ಮುಖ್ಯಮಂತ್ರಿಯಾಗಿ ಭಗವಂತ್ ಮಾನ್ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಅವರ ಕ್ಯಾಬಿನೆಟ್ ಕೂಡಾ ರಚನೆಯಾಗಿದ್ದು,
ಇಂದು ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ 10 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ದಿರ್ಬಾದಿಂದ ಎರಡನೇ ಬಾರಿಗೆ ಶಾಸಕರಾಗಿರುವ ವಿರೋಧ ಪಕ್ಷದ ಮಾಜಿ ನಾಯಕ ಹರ್ಪಾಲ್ ಸಿಂಗ್ ಚೀಮಾ ಪ್ರಮಾಣ ವಚನ ಸ್ವೀಕರಿಸುವುದರೊಂದಿಗೆ ಸಮಾರಂಭ ಪ್ರಾರಂಭವಾಯಿತು.
ಬರ್ನಾಲಾದಿಂದ ಎರಡನೇ ಬಾರಿಗೆ ಗೆದ್ದ ಗುರ್ಮೀತ್ ಸಿಂಗ್ ಮೀತ್ ಹಯರ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.