Select Your Language

Notifications

webdunia
webdunia
webdunia
webdunia

Operation Sindoor: ಊಹಿಸಲಾಗದ ರೀತಿ ಪಾಕಿಸ್ತಾನ ಮೇಲೆ ದಾಳಿ ಮಾಡಿದ ಭಾರತ

ಆಪರೇಷನ್ ಸಿಂದೂರ್

Sampriya

ಇಸ್ಲಾಮಾಬಾದ್ , ಶನಿವಾರ, 10 ಮೇ 2025 (10:18 IST)
ಇಸ್ಲಾಮಾಬಾದ್: ಪಾಕಿಸ್ತಾನ ಹಾಗೂ ಭಾರತ ನಡುವೆ ಉದ್ವಿಗ್ನ ಪರಿಸ್ಥಿತಿ ಮುಂದುವರೆದಿದ್ದು, ಇಂದು ಮುಂಜಾನೆ ಪಾಕ್‌ನ ಮೂರು ವಾಯುನೆಲೆಗಳ ಮೇಲೆ ಭಾರತ ಕ್ಷಿಪಣಿ ಮತ್ತು ಡ್ರೋನ್‌ಗಳು ಗುರಿಯಾಗಿಸಿ ದಾಳಿ ನಡೆಸಿದೆ.

ಪಾಕಿಸ್ತಾನದ ಮಿಲಿಟರಿ ವಕ್ತಾರ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ ಅವರು ಪತ್ರಿಕಾಗೋಷ್ಠಿಯಲ್ಲಿ ಇಂದು ನಸುಕಿನ ಜಾವ 4 ಗಂಟೆ ಸುಮಾರಿಗೆ  ಪಾಕಿಸ್ತಾನ ವಾಯುಪಡೆಯ ನೂರ್ ಖಾನ್ (ಚಕ್ಲಾಲಾ, ರಾವಲ್ಪಿಂಡಿ), ಮುರಿಯ್ (ಚಕ್ವಾಲ್) ಮತ್ತು ರಫೀಕಿ (ಜಾಂಗ್ ಜಿಲ್ಲೆಯ ಶೋರ್ಕೋಟ್) ವಾಯುನೆಲೆಗಳನ್ನು ಭಾರತ ಗುರಿಯಾಗಿಸಿ ದಾಳಿ ಮಾಡಿದೆ ಎಂದು ಹೇಳಿದ್ದಾರೆ.

ವಾಯುಪಡೆಯ ಎಲ್ಲಾ ಸ್ವತ್ತುಗಳು ಸುರಕ್ಷಿತವಾಗಿವೆ ಎಂದು ಅವರು ಹೇಳಿದ್ದಾರೆ. ಭಾರತವು ತನ್ನ ಜೆಟ್‌ ಮೂಲಕ ಗಾಳಿಯಿಂದ ಮೇಲ್ಮೈಗೆ ಕ್ಷಿಪಣಿಗಳನ್ನು ಹಾರಿಸಿದೆ, ಪಾಕಿಸ್ತಾನದ ವಾಯು ರಕ್ಷಣಾ ವ್ಯವಸ್ಥೆಯು ಹಲವಾರು ಕ್ಷಿಪಣಿಗಳನ್ನು ತಡೆಹಿಡಿದಿದೆ ಎಂದು ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಯಾವುದೇ ಪ್ರಶ್ನೆಗಳಿಗೆ ಉತ್ತರಿಸದೆ ಹೇಳಿಕೆ ನೀಡಿ ಹಠಾತ್ತನೆ ಕೊನೆಗೊಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

India Pakistan:ರಾತ್ರಿಯಾಗುತ್ತಿದ್ದಂತೇ ಪಾಕಿಸ್ತಾನದಿಂದ ಮತ್ತೆ ದಾಳಿ ಶುರು, 3 ರಾಜ್ಯ ಟಾರ್ಗೆಟ್