Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಕೋವಿಡ್ಗೆ ತುತ್ತಾದವರಿಗೆ ಯುಪಿಎಸ್ಸಿ ಪರೀಕ್ಷೆಗೆ ಅವಕಾಶ: ಸುಪ್ರೀಂ

ಕೋವಿಡ್ಗೆ ತುತ್ತಾದವರಿಗೆ ಯುಪಿಎಸ್ಸಿ ಪರೀಕ್ಷೆಗೆ ಅವಕಾಶ: ಸುಪ್ರೀಂ
ನವದೆಹಲಿ , ಶುಕ್ರವಾರ, 1 ಏಪ್ರಿಲ್ 2022 (13:06 IST)
ನವದೆಹಲಿ : ಕೋವಿಡ್ ಸಾಂಕ್ರಾಮಿಕಕ್ಕೆ ತುತ್ತಾಗಿ ಯುಪಿಎಸ್ಸಿ ಮುಖ್ಯ ಪರೀಕ್ಷೆಗೆ ಹಾಜರಾಗಲು ವಿಫಲವಾದ ಮತ್ತು ಹೆಚ್ಚುವರಿ ಅವಕಾಶ ಬಯಸುತ್ತಿರುವ ಅಭ್ಯರ್ಥಿಗಳಿಗೆ ಮರು ಪ್ರಯತ್ನಕ್ಕೆ ಅವಕಾಶ,

ಕಲ್ಪಿಸುವ ಕುರಿತಾಗಿ ಪರಿಶೀಲನೆ ನಡೆಸಿ ಎಂದು ಸುಪ್ರೀಂಕೋರ್ಚ್ ಗುರುವಾರ ಸರ್ಕಾರಕ್ಕೆ ಸೂಚನೆ ನೀಡಿದೆ.

ಪರೀಕ್ಷೆ ಬರೆಯಲು ಹೆಚ್ಚುವರಿ ಅವಕಾಶ ನೀಡುವುದು ಸಾಧ್ಯವಿಲ್ಲ ಎಂದು ಸರ್ಕಾರ ಕಳೆದ ವಾರ ಹೇಳಿತ್ತು. ಇದರ ವಿರುದ್ಧವಾಗಿ ಮೂವರು ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ.ಎಂ.ಕಾನ್ವಿಲ್ಕರ್, ಕೋವಿಡ್ಗೆ ತುತ್ತಾಗಿದ್ದ ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಹೆಚ್ಚುವರಿ ಅವಕಾಶ ನೀಡುವ ಕುರಿತಾಗಿ ಸರ್ಕಾರ ಪರೀಶೀಲನೆ ನಡೆಸಿ ತೀರ್ಮಾನ ಕೈಗೊಳ್ಳಬೇಕು ಎಂದು ಹೇಳಿದೆ.

ಕೋವಿಡ್-19 ಸೋಂಕಿನಿಂದಾಗಿ ನಾಗರಿಕ ಸೇವಾ ಮುಖ್ಯ ಪರೀಕ್ಷೆಯಲ್ಲಿ ಹಾಜರಾಗಲು ಸಾಧ್ಯವಾಗದ ಅಭ್ಯರ್ಥಿಗಳಿಗೆ ಅವಕಾಶ ನೀಡುವ ವಿಚಾರವನ್ನು ಮರುಪರಿಶೀಲಿಸುವಂತೆ ಸುಪ್ರೀಂಕೋರ್ಟ್ ಗುರುವಾರ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.

ಕೋವಿಡ್ -19 ಕಾರಣದಿಂದಾಗಿ ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (ಯುಪಿಎಸ್ಸಿ) ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದೆ ವಂಚಿತರಾದ ವಿದ್ಯಾರ್ಥಿಗಳ ಪ್ರಾತಿನಿಧ್ಯವನ್ನು ಮರುಪರಿಶೀಲಿಸುವಂತೆ ನ್ಯಾಯಮೂರ್ತಿ ಎಎಮ್ ಖಾನ್ವಿಲ್ಕರ್ ನೇತೃತ್ವದ ಪೀಠವು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕ್ರಿಪ್ಟೋ ಕರೆನ್ಸಿಗೆ ಹೊಸ ರೂಲ್ಸ್