ಮಾರ್ಚ್ 31 ರ ಬಳಿಕವೂ 10,000ಕ್ಕಿಂತ ಹೆಚ್ಚಿನ ಮೊತ್ತದ ಹಳೆಯ ನೋಟುಗಳನ್ನು ಹೊಂದಿರುವುದು ಶಿಕ್ಷಾರ್ಹ ಅಪರಾಧವನ್ನಾಗಿ ಸುಗ್ರಿವಾಜ್ಞೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ.
ಪ್ರಧಾನಿ ಮೋದಿ ನೇತೃತ್ವದಲ್ಲಿ ಇಂದು ನಡೆಸಲಾದ ಕ್ಯಾಬಿನೇಟ್ ಸಭೆಯಲ್ಲಿ ಮಾರ್ಚ್ 31 ರ ಬಳಿಕವೂ ಹಳೆಯ ನೋಟುಗಳನ್ನು ಹೊಂದಿರುವವರಿಗೆ ಕನಿಷ್ಠ 50,000 ದಂಡ ಮತ್ತು 4 ವರ್ಷ ಜೈಲು ಶಿಕ್ಷೆ ವಿಧಿಸಲು ಕೇಂದ್ರ ಸರ್ಕಾರ ಚಿಂತಿಸುತ್ತಿದೆ. ಈ ಸಂಬಂಧ ಸುಗ್ರಿವಾಜ್ಞೆ ಹೊರಡಿಸಲು ಸಂಪುಟ ಒಪ್ಪಿಗೆ ನೀಡಿದೆ ಎಂದು ಮೂಲಗಳು ತಿಳಿಸಿವೆ.
ಹಳೆಯ ನೋಟುಗಳನ್ನು ಬ್ಯಾಂಕ್‌ಗಳಿಗೆ ಜಮಾ ಮಾಡುವ ಅವಧಿ ಡಿಸೆಂಬರ್ 30 ಕ್ಕೆ ಮುಗಿಯಲಿದ್ದು ಮಾರ್ಚ್ 31, 2017ರವರೆಗೆ ನೇರವಾಗಿ ಆರ್‌ಬಿಐ ಕಚೇರಿಯಲ್ಲಿ ಜಮಾ ಮಾಡುವ ಅವಕಾಶವಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ