ನವದೆಹಲಿ: ಐಎನ್ ಎಕ್ಸ್ ಮೀಡಿಯಾ ಹಗರಣದಲ್ಲಿ ಬಂಧಿತರಾಗಿದ್ದ ಮಾಜಿ ವಿತ್ತ ಸಚಿವ ಪಿ ಚಿದಂಬರಂ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಆಗಸ್ಟ್ 21 ರಂದು ಸಿಬಿಐ ಚಿದಂಬರಂ ಅವರನ್ನು ಬಂಧಿಸಿತ್ತು. ಆದರೆ ಇದುವರೆಗೆ ಅವರಿಗೆ ಜಾಮೀನು ಸಿಕ್ಕಿರಲಿಲ್ಲ. ಹೀಗಾಗಿ ಕಳೆದ ಎರಡು ತಿಂಗಳಿನಿಂದ ತಿಹಾರ್ ಜೈಲು ವಾಸ ಅನುಭವಿಸುತ್ತಿದ್ದರು.
ಇದೀಗ ಸುಪ್ರೀಂಕೋರ್ಟ್ ಜಾಮೀನು ಅರ್ಜಿಯ ವಿಚಾರಣೆ ನಡೆಸಿ ತೀರ್ಪು ಪ್ರಕಟಿಸಿದ್ದು, 2 ಲಕ್ಷ ರೂ. ಬಾಂಡ್ ಮತ್ತು ಎರಡು ಶ್ಯೂರಿಟಿಗಳೊಂದಿಗೆ ಜಾಮೀನು ನೀಡಿದೆ. ಆದರೆ ಕೋರ್ಟ್ ಒಪ್ಪಿಗೆಯಿಲ್ಲದೇ ವಿದೇಶ ಪ್ರಯಾಣ ಬೆಳೆಸುವಂತಿಲ್ಲ ಎಂದು ಷರತ್ತು ವಿಧಿಸಿದೆ. ಅಂತೂ 100 ದಿನಗಳ ತಿಹಾರ್ ಜೈಲು ವಾಸ ಕೊನೆಯಾಗಿದೆ.