ಪುತ್ರನ ಮನೆ ಹಾಗೂ ಕಂಪೆನಿಗಳ ಮೇಲೆ ನಡೆದ ಸಿಬಿಐ ದಾಳಿಯ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಮಾಜಿ ಸಚಿವ ಪಿ.ಚಿದಂಬರಂ ಹೇಳಿದ್ದಾರೆ.
ಹೈಕೋರ್ಟ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಕೀಲನಾಗಿ ಹೈಕೋರ್ಟ್‌ನಲ್ಲಿ ವಾದ ಮಂಡಿಸಲು ಬಂದಿದ್ದೇನೆಯೇ ಹೊರತು ಸಿಬಿಐ ದಾಳಿಯ ಬಗ್ಗೆ ಪ್ರತಿಕ್ರಿಯೆ ನೀಡಲು ಅಲ್ಲ ಎಂದು ತಿಳಿಸಿದ್ದಾರೆ.
ಪುತ್ರ ಕಾರ್ತಿಕ್‌ಗೆ ಸಂಬಂದಿಸಿದ 11 ಸ್ಥಳಗಳ ಮೇಲೆ ದಾಳಿ ಮಾಡಿದ ಸಿಬಿಐ ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ವಿದೇಶಿ ಬಂಡವಾಳ ಹೂಡಿಕೆಯಲ್ಲಿ ಅವ್ಯವಹಾರವಾಗಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ ಕೆಲವೇ ದಿನಗಳಲ್ಲಿ ಸಿಬಿಐ ದಾಳಿ ನಡೆದಿರುವುದು ರಾಜಕೀಯ ಪ್ರೇರಿತವಾಗಿದೆ. ವಿದೇಶಿ ಬಂಡವಾಳ ಹೂಡಿಕೆ ಕುರಿತಂತೆ ತನಿಖೆ ನಡೆಸಲು ಸಿಬಿಐಗೆ ಯಾವುದೇ ಅಧಿಕಾರವಿಲ್ಲ. ಅಧಿಕಾರಿಗಳನ್ನು ಮಾತ್ರ ಪ್ರಶ್ನಿಸಬಹುದು ಎಂದು ಪಿ.ಚಿದಂಬರಂ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.