ಜಮ್ಮು: ಸಾಂಬಾ ವಲಯದಲ್ಲಿ ಶುಕ್ರವಾರ ಪಾಕಿಸ್ತಾನದ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ ಬಿಎಸ್ಎಫ್ ಯೋಧ ಹುತಾತ್ಮನಾಗಿ, ಇಬ್ಬರು ನಾಗರಿಕರೂ ಮೃತಪಟ್ಟಿದ್ದಾರೆ.
ಮಧ್ಯಾಹ್ನ ನಡೆದ ಶೆಲ್ ದಾಳಿಯಿಂದ ಬಿಎಸ್ಎಫ್ ನ ಹೆಡ್ ಕಾನ್ ಸ್ಟೇಬಲ್ ಗಾಯಗೊಂಡಿದ್ದ. ಸಂಜೆ ವೇಳೆಗೆ ಚಿಕಿತ್ಸೆಗೆ ಸೂಕ್ತವಾಗಿ ಸ್ಪಂದಿಸದೇ ಮೃತಪಟ್ಟಿದ್ದಾರೆ.
ಈ ದಾಳಿಗೆ ಜಮ್ಮು ಮತ್ತು ಸಾಂಬಾ ಜಿಲ್ಲೆಗಳಲ್ಲಿನ ಗಡಿ ಗ್ರಾಮಗಳನ್ನು ಮುಖ್ಯ ಗುರಿಯನ್ನಾಗಿಸಿಕೊಳ್ಳಲಾಗಿತ್ತು. ಈ ದಾಳಿಯ ಸಂದರ್ಭ ಇಬ್ಬರು ನಾಗರಿಕರು ಮೃತಪಟ್ಟಿದ್ದಾರೆ ಹಾಗೂ, ಮೂವರು ಗಾಯಗೊಂಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ